ಮಂಗಳೂರು : ಉಜಿರೆಯಲ್ಲಿ ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪರವಾಗಿ ಇಂದು ಅಪಾರ ಸಂಖ್ಯೆಯಲ್ಲಿ ಸೇರಿದ ಭಕ್ತರಿಂದ ಪ್ರತಿಭಟನೆ ನಡೆಯಿತು. ಈ ವೇಳೆ ಸ್ಥಳಕ್ಕಾಗಮಿಸಿದ ಸೌಜನ್ಯ ತಾಯಿಗೆ ಪ್ರತಿಭಟನಾಕಾರರಿಂದ ಮುತ್ತಿಗೆ ಹಾಕಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಪ್ರಾಂಶುಪಾಲನಿಂದ ಬಾಲಕಿಯ ಅತ್ಯಾಚಾರ
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ ನಿರಪರಾಧಿ ಎಂದು ಸಿಬಿಐ ಕೋರ್ಟ್ನಿಂದ ವರದಿ ಬಂದ ಬೆನ್ನಲ್ಲೇ ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ ಬಂದಿದ್ದು, ಜಸ್ಟಿಸ್ ಫಾರ್ ಸೌಜನ್ಯ ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ.
ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವೀರೇಮದ್ರ ಹೆಗ್ಗಡೆ ಕುಟುಂಬದ ವಿರುದ್ದ ಅಪಪ್ರಚಾರಗಳು ಕೇಳಿ ಬರುತ್ತಿರುವ ಹಿನ್ನೆಲೆ ಇಂದು ಧರ್ಮಸ್ಥಳ ಪರವಾಗಿ ಉಜಿರೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಜಸ್ಟಿಸ್ ಫಾರ್ ಸೌಜನ್ಯಾ ಭಿತ್ತಿಪತ್ರ ಹಿಡಿದು ಬಂದಿದ್ದ ಸೌಜನ್ಯಾ ತಾಯಿ ಮತ್ತು ಇತರ ಮಹಿಳೆಯರಿಗೆ ಮುತ್ತಿಗೆ ಹಾಕಿದ ಪ್ರತಿಭಟನಕಾರರು ವೇದಿಕೆ ಹತ್ತಲು ಬಿಡದೇ ದಿಕ್ಕಾರ ಘೋಷಣೆ ಕೂಗಿದರು.
ಈ ವೇಳೆ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಪೊಲೀಸರು ಆಕ್ರೋಶಿತರ ಮಧ್ಯಪ್ರವೇಸಿ ಉದ್ರಿಕ್ತರನ್ನು ಚದುರಿಸಿ ಸೌಜನ್ಯ ತಾಯಿ ಕುಸುಮಾವತಿಯನ್ನು ಸ್ಥಳದಿಂದ ಬೇರೆಡೆಗೆ ಕರೆದೊಯ್ದರು.