Friday, November 22, 2024

ನಿಗಮ-ಮಂಡಳಿಗಳ ನೇಮಕಕ್ಕೆ ಸಿದ್ದತೆ: ಶೇ.70 ರಷ್ಟು ಕಾರ್ಯಕರ್ತರಿಗೆ ಮೀಸಲು!

ಬೆಂಗಳೂರು : ಕಾಂಗ್ರೆಸ್​ ಹೈಕಮಾಂಡ್​ ನಾಯಕರ ಜೊತೆ  ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ರಾಜಕಾರಣದ ಹಲವು ವಿಚಾರಗಳು ಚರ್ಚೆಗೆ ಬಂದಿದ್ದು, ಪಕ್ಷದ ನಿಷ್ಟಾವಂತ ಕಾರ್ಯಕರ್ತರನ್ನು ಗಮನದಲ್ಲಿಟ್ಟಿಕೊಂಡು ನಿಗಮ-ಮಂಡಳಿಗಳಿಗೆ ಸೂಕ್ತ ವ್ಯಕ್ತಗಳ ಆಯ್ಕೆ ಬಗ್ಗೆಯೂ ಚರ್ಚೆ ನಡೆದಿದೆ.

ಇದನ್ನೂ ಓದಿ: ವಿಚಾರಣೆಗೆ ಮುಂದಾದ ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ!

ನಿಗಮ-ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕ, ಸದಸ್ಯರನ್ನು ಆಯ್ಕೆ ಮಾಡುವಾಗ ಯಾವ ರೀತಿ ಆಯ್ಕೆಗಳು ನಡೆಯಬೇಕೆಂಬ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ.

ಎರಡು ಸೂತ್ರವನ್ನು ಅಳವಡಿಸಿಕೊಳ್ಳಲು ನಿಶ್ಚಯಿಸಲಾಗಿದೆ. ಒಟ್ಟು ನಿಗಮಗಳ ಪೈಕಿ ಶೇ.30ರಷ್ಟನ್ನು ಶಾಸಕರಿಗೆ, ಶೇ.70ರಷ್ಟನ್ನು ಪಕ್ಷದ ಕಾರ್ಯಕರ್ತರಿಗೆ ನೀಡಲು ಉದ್ದೇಶಿಸಲಾಗಿದೆ. ಅಲ್ಲದೇ, ಒಟ್ಟು ಹಂಚಿಕೆಯಲ್ಲಿ ಶೇ.50ರಷ್ಟನ್ನು ಯುವಕರಿಗೆ ನೀಡಬೇಕೆಂಬ ಸೂಚನೆಯೂ ಇದೆ. ಅಷ್ಟೇ ಅಲ್ಲದೇ ಲೋಕಸಭೆ ಚುನಾವಣೆ ಉದ್ದೇಶದಿಂದ ತಡಮಾಡದೇ ನೇಮಕ ಪ್ರಕ್ರಿಯೆ ನಡೆಯಬೇಕು, ಸಮುದಾಯವಾರು ಪ್ರಾತಿನಿಧ್ಯ ಕೊಡಬೇಕು, ಚುನಾವಣೆಯಲ್ಲಿ ದುಡಿದವರಿಗೆ ಮಣೆಹಾಕಬೇಕೆಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಒಟ್ಟಾರೆ 85 ಮಂದಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷರಾಗಿ ನೇಮಕ ಮಾಡಲು ಅವಕಾಶವಿತ್ತು. ಆದರೆ, ಇತ್ತೀಚೆಗೆ ಕೆಲವನ್ನು ರದ್ದು ಮಾಡಲಾಗಿದೆ, ಇನ್ನಷ್ಟು ರದ್ದು ಮಾಡುವ ಅಥವಾ ಇಲಾಖೆಯೊಂದಿಗೆ ವಿಲೀನಗೊಳಿಸುವ ಕಾರ್ಯ ಇಷ್ಟರಲ್ಲೇ ನಡೆಯಲಿದೆ. ಹೀಗಾಗಿ ಅಂದಾಜು 70 ಮಂದಿಗೆ ಅವಕಾಶ ಸಿಗಲಿದೆ. ಈ ಪೈಕಿ 21-22 ಶಾಸಕರಿಗೆ ಪ್ರಮುಖ ಅಥವಾ ಲಾಭದಾಯಕ ನಿಗಮ ಮಂಡಳಿಯ ಅಧ್ಯಕ್ಷ ಹುದ್ದೆ ಸಿಗಬಹುದು ಎನ್ನಲಾಗುತ್ತಿದೆ.

RELATED ARTICLES

Related Articles

TRENDING ARTICLES