Monday, December 23, 2024

ಸಾಲುಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

ಬೆಂಗಳೂರು : ವೃಕ್ಷಮಾತೆ, ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಸಂಜೆ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ. ಅವರನ್ನು ಕೂಡಲೇ ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ತಿಮ್ಮಕ್ಕಗೆ ಚಿಕಿತ್ಸೆ ನೀಡುತ್ತಿದ್ದಾರೆ.

ವೃಕ್ಷಮಾತೆ ತಿಮ್ಮಕ್ಕ ಅವರಿಗೆ ಸದ್ಯ 112 ವರ್ಷ ವಯಸ್ಸು. ಕಳೆದ 65 ವರ್ಷಗಳಿಂದ ಅವರು ಗಿಡಗಳನ್ನು ನೆಟ್ಟು ಪೋಷಿಸುವ ಕಾಯಕದಲ್ಲಿ ತೊಡಗಿದ್ದಾರೆ. ಈವೆರಗೆ 8 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟು ವೃಕ್ಷಮಾತೆ ಎಂದು ಖ್ಯಾತಿ ಗಳಿಸಿದ್ದಾರೆ.

ಇನ್ನೂ, ರಾಜ್ಯ ಸರ್ಕಾರ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಹಾಗೂ ಪರಿಸರ ರಾಯಭಾರಿಯಾಗಿ ಅವರನ್ನೇ ಮುಂದುವರಿಸಿದೆ.

RELATED ARTICLES

Related Articles

TRENDING ARTICLES