Thursday, January 23, 2025

70 ವರ್ಷದಲ್ಲಿ ಕಾಂಗ್ರೆಸ್ ನಾಯಕರು ಏನೂ ಮಾಡಲಿಲ್ಲ : ಪ್ರಧಾನಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಅಮೃತ ಭಾರತ ಯೋಜನೆಗೆ ಚಾಲನೆ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

70 ವರ್ಷದ ಆಡಳಿತದಲ್ಲಿ ಕಾಂಗ್ರೆಸ್ ನಾಯಕರು ಏನೂ ಮಾಡಲಿಲ್ಲ, ದೇಶದ ಅಭಿವೃದ್ಧಿ ಮಾಡಲು ಹಿಂದೇಟು ಹಾಕಿದ್ದಾರೆ. ಬಿಜೆಪಿ ನಾಯಕರು ಅಭಿವೃದ್ಧಿ ಮಾಡಲು ಬಂದ್ರೆ ಅದಕ್ಕೂ ಈ ಕಾಂಗ್ರೆಸ್ ನಾಯಕರು ಅಡ್ಡಗಾಲು ಹಾಕಿದ್ದಾರೆ. ಇದೇ ವೇಳೆ I.N.D.I.A ಒಕ್ಕೂಟದ ವಿರುದ್ಧವೂ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಪ್ರತಿಪಕ್ಷಗಳು ಕೆಟ್ಟ ರಾಜಕೀಯ ಮಾಡುತ್ತಿವೆ. ಪ್ರತಿಪಕ್ಷಗಳು ನಕಾರಾತ್ಮಕ ರಾಜಕಾರಣ ಮಾಡುತ್ತಿವೆ. ಆ ಕೆಟ್ಟ ರಾಜಕೀಯದಿಂದ ಮೇಲೆದ್ದು, ನಾವು ಸಕಾರಾತ್ಮಕ ರಾಜಕೀಯ ಹಾದಿಯಲ್ಲಿ ಸಾಗುತ್ತಿದ್ದೇವೆ. ಬಿಜೆಪಿ ಸರ್ಕಾರ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ ಎಂದು ಹೇಳಿದ್ದಾರೆ.

ವಿಪಕ್ಷಗಳಿಗೂ ಸೇರಿದ ಸಂಪತ್

ದೇಶದ ಇಂದಿನ ಮತ್ತು ಭವಿಷ್ಯದ ಅಗತ್ಯತೆಗಳ ಬಗ್ಗೆ ಚಿಂತಿಸುತ್ತಾ ನೂತನ ಸಂಸತ್ ಭವನವನ್ನು ಆಧುನೀಕರಣಗೊಳಿಸಿದ್ದೇವೆ. ಸಂಸತ್ ಭವನವು ಪ್ರಜಾಪ್ರಭುತ್ವದ ದೇಗುಲವಾಗಿದೆ. ಇದು ಆಡಳಿತ ಪಕ್ಷ, ವಿಪಕ್ಷ ಎಲ್ಲರಿಗೂ ಸೇರಿದ ಸಂಪತ್ತಾಗಿದೆ. ಆದರೆ, ಇದಕ್ಕೂ ವಿಪಕ್ಷಗಳು ವಿರೋಧಿಸಿದವು. ಕರ್ತವ್ಯ ಪಥ, ರಾಷ್ಟ್ರೀಯ ಯುದ್ಧ ಸ್ಮಾರಕ ನಿರ್ಮಾಣಕ್ಕೂ ವಿರೋಧ ವ್ಯಕ್ತಪಡಿಸಿದರು ಎಂದು ಗುಡುಗಿದ್ದಾರೆ.

ಇದನ್ನೂ ಓದಿ : ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ

ಭಾರತೀಯ ರೈಲ್ವೆಗೆ ಅಮೃತ ಘಳಿಗೆ

ದೇಶಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು  ಶಂಕುಸ್ಥಾಪನೆ ಮಾಡಿದ್ದಾರೆ. ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ದೇಶದಾದ್ಯಂತ ಒಟ್ಟು 1,309 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲಾಗುವುದು.

ಇದರ ಅಡಿಯಲ್ಲಿ ಒಟ್ಟು 24 ಸಾವಿರ ಕೋಟಿ  ವೆಚ್ಚದಲ್ಲಿ ಈ ನಿಲ್ದಾಣಗಳನ್ನು ನಿರ್ಮಿಸಲಾಗುವುದು. ಈ ನಿಲ್ದಾಣಗಳನ್ನು ನಗರದ ಎರಡೂ ಬದಿಗಳನ್ನು ಸರಿಯಾಗಿ ಸಂಯೋಜಿಸಿ ಸಿಟಿ ಸೆಂಟರ್​ಗಳಾಗಿ ಅಭಿವೃದ್ಧಿಪಡಿಸಲು ಮಾಸ್ಟರ್ ಪ್ಲಾನ್‌ಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಕರ್ನಾಟಕದಲ್ಲಿ 13 ನಿಲ್ದಾಣಗಳು ಇರಲಿವೆ.

RELATED ARTICLES

Related Articles

TRENDING ARTICLES