Thursday, October 31, 2024

ಲೋ ಬಿಪಿಯಾಗಿ ಕರ್ತವ್ಯನಿರತ ಹೆಡ್​ಕಾನ್ಸ್​ಟೇಬಲ್ ಸಾವು

ಹಾವೇರಿ : ಲೋ ಬಿಪಿಯಾಗಿ ಕುಸಿದುಬಿದ್ದು ಕರ್ತವ್ಯನಿರತ ಹೆಡ್​​ಕಾನ್ಸ್​ಟೇಬಲ್​ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ನಡೆದಿದೆ.

ಬಸಪ್ಪ ಮಲ್ಲಾಡದ(48) ಮೃತ ಹೆಡ್​ಕಾನ್ಸ್​ಟೇಬಲ್​. ಇವರು ರಟ್ಟೀಹಳ್ಳಿ ಪೊಲೀಸ್​ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ರಾಣೆಬೆನ್ನೂರು ತಾಲ್ಲೂಕಿನ ಹಾರೋಗೊಪ್ಪ ನಿವಾಸಿ.

ಮೃತ ಬಸಪ್ಪ ಅವರು 26 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 112 ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಈ ಸಂಬಂಧ ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES