Tuesday, September 17, 2024

ಅಲ್ಪಸಂಖ್ಯಾತರಿಗೆ 2 ಸೀಟು ಡಿಮ್ಯಾಂಡ್ ಮಾಡ್ತೀವಿ : ಸಲೀಂ ಅಹಮದ್

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ 2 ಸೀಟು ಡಿಮ್ಯಾಂಡ್ ಮಾಡ್ತೀವಿ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಲ್ಲಸಂಖ್ಯಾತ ಸಮುದಾಯಕ್ಕೆ ಎಂಎಲ್​ಸಿ ಸ್ಥಾನ ಕೊಡಬೇಕು ಅಂತ ನಾವು ಡಿಮ್ಯಾಂಡ್ ಮಾಡಿಲ್ಲ. ನಿಗಮ-ಮಂಡಳಿಯಲ್ಲಿ ನಮ್ಮ ಸಮುದಾಯಕ್ಕೆ ಹೆಚ್ಚು ಸ್ಥಾನ ಕೊಡಬೇಕು ಅಂತ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಅನ್ಯಾಯ ಆಗಿದೆ. ಎಂಎಲ್​ಸಿ ಸ್ಥಾನ ಅಲ್ಪಸಂಖ್ಯಾತರಿಗೆ ಕೊಡುತ್ತಿಲ್ಲ ಎಂಬ ವಿಚಾರ ಕುರಿತು ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯ ಆಗಿಲ್ಲ. ಈಗವರೆಗೂ ನಾಮ ನಿರ್ದೇಶಿತ ಎಂಎಲ್​ಸಿ ಸ್ಥಾನಕ್ಕೆ ರಾಜ್ಯಪಾಲರಿಗೆ ಯಾವುದೇ ಹೆಸರು ಶಿಫಾರಸ್ಸು ಆಗಿಲ್ಲ. ಸಿಎಂ ಕೂಡಾ ರಾಜ್ಯಪಾಲರಿಗೆ ಪತ್ರ ಬರೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬಜೆಟ್​ನಲ್ಲಿ ಹೆಚ್ಚು ಅನುದಾನ

ಅಲ್ಪಸಂಖ್ಯಾತ ಸಮುದಾಯಕ್ಕೆ ಬಜೆಟ್​ನಲ್ಲಿ ಹೆಚ್ಚು ಅನುದಾನ ಕೊಟ್ಟಿದ್ದಾರೆ. ಸರ್ಕಾರ ಬಂದು ಎರಡು ಮೂರು ತಿಂಗಳು ಆಗಿದೆ. ಮುಂದೆ ಮತ್ತಷ್ಟು ಅನುದಾನ ಸಿಗಲಿದೆ ಎಂದು ಸಲೀಂ ಅಹಮದ್ ಹೇಳಿದ್ದಾರೆ.

ಭ್ರಷ್ಟಾಚಾರ ವಿಚಾರವಾಗಿ ಹೆಚ್.ಡಿ. ಕುಮಾರಸ್ವಾಮಿ ಆರೋಪ ವಿಚಾರವಾಗಿ ಮಾತನಾಡಿ, ಕುಮಾರಸ್ವಾಮಿ ಪ್ರವಾಸ ಮಾಡಿ ಬಂದಿದ್ದಾರೆ. ವಿಧಾನಸಭೆಯಲ್ಲಿ ಪೆನ್ ಡ್ರೈವ್ ತೋರಿಸಿದ್ರು. ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಅವರ ಬಳಿ ದಾಖಲೆ ಇದ್ರೆ ಕೊಡಲಿ ತನಿಖೆ ಮಾಡ್ತೀವಿ ಎಂದು ಚಾಟಿ ಬೀಸಿದ್ದಾರೆ.

RELATED ARTICLES

Related Articles

TRENDING ARTICLES