Wednesday, December 18, 2024

ಕಾಂಗ್ರೆಸ್ಸಿಗರಿಗೆ ನಾಚಿಕೆ, ಮಾನ-ಮರ್ಯಾದೆ, ಬುದ್ದಿ ಇದ್ಯಾ? : ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷ ಎಲ್ಲಾ ಸಂದರ್ಭದಲ್ಲಿಯೂ, ಎಲ್ಲದಕ್ಕೂ ವಿರೋಧ ಮಾಡುತ್ತೆ. ಕಾಂಗ್ರೆಸ್ ಪಕ್ಷದವರು ಸುಳ್ಳು ಹೇಳುವ ಕಾಂಪಿಟೇಶನ್​ಗೆ ಬಿದ್ದಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹರಿಹಾಯ್ದಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ನವರು ನಮಗೆ ಹತ್ತಾರು ಲಕ್ಷ ಕೋಟಿ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ ಎಂದು ಹೇಳುತ್ತಾರೆ. ನಾಚಿಕೆ, ಮಾನ-ಮರ್ಯಾದೆ, ಬುದ್ಧಿ ಇದೆಯಾ? ಎಂದು ಪ್ರಶ್ನೆ ಮಾಡಲು ಬಯಸುತ್ತೇನೆ ಎಂದು ಗುಡುಗಿದ್ದಾರೆ.

ಓಡಿ ಹೋದ ಉದ್ಯಮಿಗಳ, ಓಡಿ ಹೋದ ವಂಚಕರ ಆಸ್ತಿಯನ್ನು ವಶಪಡಿಸಿಕೊಳ್ಳುವ ಹೊಸ ಕಾನೂನನ್ನು ತರಲಾಗಿದೆ. ರಾಜ್ಯದ ಹಾಗೂ ದೇಶ ಜನರಿಗೆ ಸ್ಪಷ್ಟವಾಗಿ ಹೇಳುತ್ತೇವೆ ಯಾವ ಉದ್ಯಮಿಗಳ ಸಾಲವನ್ನೂ ನಾವು ಮನ್ನಾ ಮಾಡಿಲ್ಲ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ದಾಖಲೆ ಕೊಡಲಿ

ನೈಸ್ ರಸ್ತೆ ಬಗ್ಗೆ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡುತ್ತೇನೆಂಬ ಹೇಳಿಕೆ ವಿಚಾರಕ್ಕೆ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿಯವರು ದಾಖಲೆಗಳನ್ನು ಕೊಡಲಿ. ಅದರ ಬಗ್ಗೆ ಸೂಕ್ತವಾದ ಪರಿಶೀಲನೆ ಮಾಡುವ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಧಾರವಾಡ-ಬೆಳಗಾವಿ ರೈಲು ಮಾರ್ಗ ವಿಳಂಬವಾಗುತ್ತಿರುವುದರ ಬಗ್ಗೆ ಮಾತನಾಡಿದ ಅವರು, ಭೂಸ್ವಾಧೀನ ಪ್ರಕ್ರಿಯೆ ಆಗಬೇಕು, ಅರ್ಧಕ್ಕಿಂತ ಹೆಚ್ಚು ಭೂಮಿ ಕೊಡಬೇಕು. ಆಗ ಕಾಮಗಾರಿ ಆರಂಭಿಸಬಹುದು ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES