Monday, December 23, 2024

ಕ್ಯಾಂಟರ್ ವಾಹನಕ್ಕೆ ಕಾರು ಡಿಕ್ಕಿ ; ಸ್ಥಳದಲ್ಲೇ ಇಬ್ಬರ ಸಾವು

ಬೆಂಗಳೂರು : ಮಾರ್ಗದ ಮಧ್ಯದಲ್ಲಿ ಕ್ಯಾಂಟರ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ನೆಲಮಂಗಲ ತಾಲೂಕಿನ ಟಿ ಬೇಗೂರು ಬಳಿ ನಡೆದಿದೆ.

ಐದು ಜನ ಅಂಗೊಂಡ್ಡನಹಳ್ಳಿ ಗ್ರಾಮ ಪಂಚಾಯತಿಯ ಸದಸ್ಯರಾಗಿದ್ದರು. ಬುಧವಾರ ನೆಡೆದಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ಪಾರ್ಟಿ ಮಾಡಲು ಬಂದಿದ್ದ ಸದಸ್ಯರು. ಇಂದು ನೆಲಮಂಗಲ ದಾಬಸ್ಪೇಟೆಯ ರೆಸಾರ್ಟ್​ಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ.

ಇದನ್ನು ಓದಿ : ನಟ ವಿಜಯ್​ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ!

ಶನಿವಾರದೊಂದು ನೆಲಮಂಗಲ ಸಮೀಪವಿರುವ ಅಗರ್ವಾಲ್ ಹೋಟೆಲ್​ನಲ್ಲಿ ಉಳಿದುಕೊಂಡಿದ್ದ ಸದಸ್ಯರುಗಳು, ರೆಸಾರ್ಟ್ನಲ್ಲಿ ಪಾರ್ಟಿ ಮಾಡಲು ಪ್ಲಾನ ಮಾಡಿಕೊಂಡಿದ್ದರು. ಆದರೆ ದುರಾದೃಷ್ಟವಶಾತ್ಇಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಿರುವ ವೇಳೆ ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಭೀಕರ ಅಪಘಾತಕ್ಕೆ ಒಳಗಾದ ಸದಸ್ಯರ ಕಾರು.

ಅಪಘಾತದ ಪರಿಣಾಮ ಹೊಸಕೋಟೆ ಮೂಳಬಾಗಿಲು ಗ್ರಾಮದ ಕೇಶವ್ ರೆಡ್ಡಿ ಮತ್ತು ಶ್ರೀನಿವಾಸ್ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನೂ ಮೂರು ಜನರಿಗೆ ಚಿಂತಾಜನಕವಾಗಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

RELATED ARTICLES

Related Articles

TRENDING ARTICLES