Wednesday, January 22, 2025

ಸ್ಪಂದನಾ ನಿಧನಕ್ಕೆ ಹೆಚ್.ಡಿ ಕುಮಾರಸ್ವಾಮಿ ಸಂತಾಪ

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪಂದನಾ ಅವರ ನಿಧನದಿಂದ ತೀವ್ರ ಆಘಾತ ಉಂಟಾಗಿದೆ. ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಬ್ಯಾಂಕಾಕ್ ಪ್ರವಾಸದಲ್ಲಿ ಹೃದಯಾಘಾತಕ್ಕೆ ತುತ್ತಾಗಿರುವುದು ನೋವಿನ ಸಂಗತಿ. ಚಿಕ್ಕ ವಯಸ್ಸಿನಲ್ಲಿ ಆರೋಗ್ಯವಾಗಿ ಇದ್ದೋರು ಇಂತಹ ಸಾವು ಕಂಡಿರುವುದು ದುಃಖ ತಂದಿದೆ. ಅವರ ಕುಟುಂಬದವರಿಗೆ ಈ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು

ಇದೊಂದು ಆಘಾತಕಾರಿ ಘಟನೆ. ಕೋವಿಡ್ ನಂತರ ಇಂತಹ ಘಟನೆಗಳು ಅಚ್ಚರಿ ರೂಪದಲ್ಲಿ ಆಗುತ್ತಿವೆ. ಕೋವಿಡ್ ನಂತರ ಆದ ಕೆಲ ಸಮಸ್ಯೆ, ಮನುಷ್ಯನ ದೇಹದ ಮೇಲೆ ಆಗಿರುವ ಸಮಸ್ಯೆಗಳಿಂದ ಹೀಗೆ ಆಗುತ್ತಿದೆ. ಪ್ರತಿಯೊಬ್ಬರು ಎಚ್ಚರಿಕೆಯಿಂದ, ಜಾಗೃತೆಯಿಂದ ಆರೋಗ್ಯದ ಎಚ್ಚರವಹಿಸಬೇಕು. ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಕೆಲಸವೂ ಆಗಬೇಕು. ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಕುಟುಂಬದಲ್ಲಿ ದೊಡ್ಡ ನೋವು ತರಿಸಿದೆ. ಆ ನೋವಿನಿಂದ ಹೊರ ಬರೋದು ತುಂಬಾ ಕಷ್ಟ ಎಂದು ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

RELATED ARTICLES

Related Articles

TRENDING ARTICLES