Saturday, January 11, 2025

ಕಾಲು ಜಾರಿಬಿದ್ದ ಸಾಲುಮರದ ತಿಮ್ಮಕ್ಕ: ಬೆನ್ನುಮೂಳೆಗೆ ಪೆಟ್ಟು, ಆಸ್ಪತ್ರೆಗೆ ದಾಖಲು!

ಬೆಂಗಳೂರು: ಪದ್ಮಶ್ರೀ ಪುರಸೃತೆ ಸಾಲು ಮರದ ತಿಮ್ಮಕ್ಕ ಅವರು ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ಬೆನ್ನು ಮೂಳೆಗೆ ಪೆಟ್ಟಾಗಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದ್ದು ಜಯನಗರದ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಸ್ನೇಹಿತರ ದಿನದಂದೇ ಸ್ನೇಹಿತನ ಬರ್ಬರ ಹತ್ಯೆ

ಸಾಲು ಮರದ ತಿಮ್ಮಕ್ಕ ಅವರು ಮಂಜುನಾಥನಗರದ ತಮ್ಮ ನಿವಾಸದಲ್ಲಿ ಶೌಚಾಲಯದಿಂದ ಹೊರ ಬರುವಾಗ ಮನೆಯ ಹಾಲ್‌ನಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಈ ವೇಳೆ ಬೆನ್ನು ಮೂಳೆಗೆ ತೀವ್ರ ಪೆಟ್ಟಾಗಿದೆ. ತಕ್ಷಣ ಜಯನಗರದ ಆಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು ತಿಮ್ಮಕ್ಕ ಅವರಿಗೆ ಇನ್ನೂ ಸ್ವಲ್ಪ ದಿನ ಹಾಸಿಗೆ ಮೇಲೆಯೇ ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದಾರೆ ಎಂದು ತಿಮ್ಮಕ್ಕ ಅವರ ಸಾಕು ಮಗ ಉಮೇಶ್ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಅವರಿಗೆ ಉಸಿರಾಟ ತೊಂದರೆ, ಮಂಡಿ ನೋವು ಕಾಣಿಸಿಕೊಂಡು ಚಿಕಿತ್ಸೆ ಪಡೆದಿದ್ದರು.

RELATED ARTICLES

Related Articles

TRENDING ARTICLES