Monday, December 23, 2024

ದೇವಾಲಯದ ಗೋಡೆ ಹಾನಿ: ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್​ ದಾಖಲಿಸಿದ ಶಾಸಕ

ಬೆಂಗಳೂರು: ನಗರದ ನಗರ್ತಪೇಟೆಯ ಬಳಿ ಇರುವ  ಶ್ರೀ ಜಲಕಂಠೇಶ್ವರ ದೇವಸ್ಥಾನದ ಗೋಡೆ ಕೆಡವಿದ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ವಿರುದ್ಧ ಶಾಸಕರ ದೂರು ನೀಡಿದ್ದು ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: ಕಾಲು ಜಾರಿಬಿದ್ದ ಸಾಲುಮರದ ತಿಮ್ಮಕ್ಕ: ಬೆನ್ನುಮೂಳೆಗೆ ಪೆಟ್ಟು, ಆಸ್ಪತ್ರೆಗೆ ದಾಖಲು!

ಚಿಕ್ಕಪೇಟೆ ಶಾಸಕ ಉದಯ್ ಬಿ. ಗರುಡಾಚಾರ್ ಸಲ್ಲಿಸಿರುವ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ತೆಗೆದುಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀಜಲಕಂಠೇಶ್ವರ ದೇಗುಲ ಪಕ್ಕದಲ್ಲಿದ್ದ ಶೆಡ್ ತೆರವು ಮಾಡುವಾಗ ಬಿಬಿಎಂಪಿ ಅಧಿಕಾರಿಗಳು ನೂರಾರು ವರ್ಷ ಹಳೆಯ ದೇವಸ್ಥಾನದ ಗೋಡೆಯನ್ನು ಹಾನಿಮಾಡಿ ಕೆಡವಿದ್ದಾರೆ. ಇದರ ಮೂಲಕ ಸಾರ್ವಜನಿಕ ಆಸ್ತಿಗೆ ನಷ್ಟ ಉಂಟು ಮಾಡಿರುತ್ತಾರೆ. ಈ ಆರೋಪದಡಿ ಸಂಬಂಧಪಟ್ಟ ಆರೋಪಿತರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಕೋರ್ಟ್‌ಗೆ ಚಿಕ್ಕಪೇಟೆ ಶಾಸಕರಾದ ಉದಯ್ ಗರುಡಾಚಾರ್​ ಖಾಸಗಿ ದೂರು ಸಲ್ಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 1ನೇ ಎಸಿಎಂಎಂ ನ್ಯಾಯಾಲಯ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಅನುಮತಿ ನೀಡಿದೆ. ಇದರ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES