Monday, December 23, 2024

ಟಾಯ್ಲೆಟ್​ನಲ್ಲಿ ವಿಡಿಯೋ : ಸಿಐಡಿ ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು : ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಕುರಿತ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ.

ಈ ಸಂಬಂಧ ಆದೇಶ ಹೊರಡಿಸಿದ್ದು, ಸಿಐಡಿ ಮುಂದಿನ ತನಿಖೆ ಕೈಗೆತ್ತಿಕೊಳ್ಳಲಿದೆ. ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಬಿಜೆಪಿ ಹಾಗೂ ಸಂಘ ಪರಿವಾರ ಆಗ್ರಹಿಸಿದ್ದವು. ಈ ಹಿಂದೆ ತನಿಖಾಧಿಕಾರಿ ಬದಲಾಯಿಸಿ ಕುಂದಾಪುರ ಡಿವೈಎಸ್​ಪಿಗೆ ತನಿಖೆಯ ಹೊಣೆ ವಹಿಸಲಾಗಿತ್ತು.

ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದೆ. ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES