Saturday, May 18, 2024

‘ಮಾಡು ಇಲ್ಲವೇ, ಮಡಿ..’ : ಪಂದ್ಯ ಗೆದ್ದು ಸರಣಿ ಜೀವಂತವಾಗಿಸಿಕೊಳ್ಳುತ್ತಾ ಭಾರತ?

ಬೆಂಗಳೂರು : ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ 3ನೇ ಟಿ-20 ಪಂದ್ಯವು ಇಂದು ನಡೆಯಲಿದೆ. ಭಾರತಕ್ಕೆ ಮಾಡು ಇಲ್ಲವೇ, ಮಡಿ ಪಂದ್ಯವಾಗಿದೆ.

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಟೀಂ ಇಂಡಿಯಾ ಪಾಲಿಗೆ ನಿರ್ಣಾಯಕ. 5 ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ಜಯ ಸಾಧಿಸಿದೆ.

ಟ್ರಿನಿಡಾಡ್​ನಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ ವಿಂಡೀಸ್ ಪಡೆ 4 ರನ್​ಗಳ ರೋಚಕ ಜಯ ಸಾಧಿಸಿತ್ತು. ಇನ್ನು ಗಯಾನಾದಲ್ಲಿ ನಡೆದ 2ನೇ ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್​ ತಂಡವು ಟೀಂ ಇಂಡಿಯಾಗೆ ಸೋಲುಣಿಸಿತ್ತು. ಈ ಮೂಲಕ ಕೆರಿಬಿಯನ್ ಪಡೆಯು ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕು

ಇದೀಗ ಮೂರನೇ ಟಿ-20 ಪಂದ್ಯದಲ್ಲೂ ವೆಸ್ಟ್ ಇಂಡೀಸ್ ಗೆಲುವು ದಾಖಲಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು. ಇತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಲು ಟೀಂ ಇಂಡಿಯಾ 3ನೇ ಪಂದ್ಯದಲ್ಲಿ ಗೆಲ್ಲಲೇಬೇಕು. ಹೀಗಾಗಿ, ಈ ಭಾರತ ತಂಡದ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಇದನ್ನೂ ಓದಿ : ‘ಗಿಲ್’ಕ್ಕೊ ಶಿವ ‘ಗಿಲ್’ಕ್ಕೊ : ಯಂಗ್ ಗನ್ ‘ಗಿಲ್’ ಘರ್ಜನೆಗೆ ಮುಂಬೈ ‘ಗಲಿಬಿಲಿ’

ಭಾರತ ತಂಡ ಸಂಭಾವ್ಯ ತಂಡ

ಶುಭ್​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್

ವೆಸ್ಟ್ ಇಂಡೀಸ್ ಸಂಭಾವ್ಯ ತಂಡ

ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್ (ನಾಯಕ), ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಅಕೇಲ್ ಹೋಸೇನ್, ಅಲ್ಝಾರಿ ಜೋಸೆಫ್, ಒಬೆಡ್ ಮೆಕಾಯ್

RELATED ARTICLES

Related Articles

TRENDING ARTICLES