Sunday, May 19, 2024

ನರ್ಸ್​ಗಳ ಬಗ್ಗೆ ಅವಹೇಳನಕಾರಿಯಾಗಿ ರೀಲ್ಸ್ : 11 MBBS ವಿದ್ಯಾರ್ಥಿಗಳು ಸಸ್ಪೆಂಡ್

ಬೆಂಗಳೂರು : ಹುಬ್ಬಳ್ಳಿಯ ಪ್ರತಿಷ್ಟಿತ ಕಿಮ್ಸ್ ಆಸ್ಪತ್ರೆಯಲ್ಲಿ ಎಂಬಿಬಿಎಸ್ (MBBS) ವಿದ್ಯಾರ್ಥಿಗಳು ಅನುಮತಿ ಇಲ್ಲದೇ ರೀಲ್ಸ್ ಮಾಡಿದ್ದು, ಆಕ್ರೋಶ ವ್ಯಕ್ತವಾಗಿದೆ.

ಹುಬ್ಬಳ್ಳಿ ಕಿಮ್ಸ್ ಎಂಬಿಬಿಎಸ್ (MBBS) ಕಾಲೇಜ್​ನ ಎರಡನೇ ವರ್ಷದ ವಿದ್ಯಾರ್ಥಿಗಳು ಮಾಡಿದ ರೀಲ್ಸ್ ಇದೀಗ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಇನ್ನು ರೀಲ್ಸ್ ಮಾಡಿರುವ 11 ವಿದ್ಯಾರ್ಥಿಗಳನ್ನ ಸಸ್ಪೆಂಡ್ ಮಾಡಿದ್ದಾರೆ.

ವಿದ್ಯಾರ್ಥಿಗಳು ರೀಲ್ಸ್ ಮಾಡಿ ವಿಡಿಯೋ ಅಪ್ಲೋಡ್ ಮಾಡಿದ್ರು. ಎರಡನೇ ವರ್ಷದ ವಿದ್ಯಾರ್ಥಿಗಳು ಮಾಡಿರೋ ರೀಲ್ಸ್​ನಲ್ಲಿ ನರ್ಸ್​​ಗಳನ್ನು ಅವಹೇಳನ ಮಾಡಿದ್ದಾರೆ ಎಂದು ಕಿಮ್ಸ್ ನರ್ಸ್​ಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. MBBS ಎರಡನೇ ವರ್ಷದ ವಿದ್ಯಾರ್ಥಿ ಮಹೇಂದ್ರ ರೆಡ್ಡಿ ಇನ್​ಸ್ಟಾಗ್ರಾಂ ಅಕೌಂಟ್​ನಲ್ಲಿ ವಿಡಿಯೋ ಅಪ್ಲೋಡ್ ಆಗಿದೆ.

ಈ ವಿಡಿಯೋದಲ್ಲಿ ನರ್ಸ್​ಗಳನ್ನು ಅವಹೇಳನ ಮಾಡಲಾಗಿದೆ ಎಂದು ಕಿಮ್ಸ್​ ನರ್ಸ್​ಗಳೆಲ್ಲ ಸೇರಿ ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪಗೆ ದೂರು ನೀಡಿದ್ದರು. ವಿಡಿಯೋ ವೈರಲ್ ಆದ ಬಳಿಕ ವಿದ್ಯಾರ್ಥಿಗಳು ವಿಡಿಯೋ ಮಾಡಿದ್ದ ನರ್ಸ್‌ಗಳ ಬಳಿ ಕ್ಷಮೆ ಕೇಳಿದ್ದಾರೆ.

RELATED ARTICLES

Related Articles

TRENDING ARTICLES