Saturday, May 18, 2024

WI vs IND : ಟೀಂ ಇಂಡಿಯಾಗೆ ಭರ್ಜರಿ ಗೆಲುವು

ಬೆಂಗಳೂರು : ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 1-2 ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು. 160 ರನ್ ಬೆನ್ನಟ್ಟಿದ ಟೀಂ ಇಂಡಿಯಾ 17.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು (164 /3) 7 ವಿಕೆಟ್‌ಗಳ ಗೆಲುವು ಸಾಧಿಸಿದೆ.

ಟೀಂ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ 83, ತಿಲಕ್ ವರ್ಮಾ ಅಜೇಯ 49* ಹಾಗೂ ಹಾರ್ದಿಕ್ ಪಾಂಡ್ಯ 20 ರನ್ ಗಳಿಸಿದರು. ವೆಸ್ಟ್​ ಇಂಡೀಸ್ ಪರ ಅಲ್ಜಾರಿ ಜೋಸೆಫ್ 2 ಹಾಗೂ ಒಬೆಡ್ ಮೆಕಾಯ್ 1 ವಿಕೆಟ್ ಪಡೆದರು.

ಮಿಂಚಿದ ಸೂರ್ಯ

ವಿಂಡೀಸ್ ವಿರುದ್ಧದ ಮೊದಲೆರಡು ಟಿ-20 ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ ಸೂರ್ಯಕುಮಾರ್ ಯಾದವ್ ಇಂದಿನ ಪಂದ್ಯದಲ್ಲಿ ಬೊಂಬಾಟ್ ಪ್ರದರ್ಶನ ನೀಡಿದರು. ಕೇವಲ 23 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದರು. 44 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನೊಂದಿಗೆ 83 ರನ್ ಸಿಡಿಸಿ ಪ್ರೇಕ್ಷಕರನ್ನು ರಂಜಿಸಿದರು.

RELATED ARTICLES

Related Articles

TRENDING ARTICLES