Friday, November 22, 2024

‘ಗೃಹಲಕ್ಷ್ಮೀ’ಗೆ ಭರ್ಜರಿ ರೆಸ್ಪಾನ್ಸ್ : ಬರೋಬ್ಬರಿ 1 ಕೋಟಿ ಅರ್ಜಿ ಸಲ್ಲಿಕೆ

ಬೆಂಗಳೂರು : ರಾಜ್ಯದಲ್ಲಿ ಗೃಹಲಕ್ಷ್ಮಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. 1.3 ಕೋಟಿಗೂ ಅಧಿಕ ಜನರು ನೋಂದಣಿ ಮಾಡಿಕೊಂಡಿದ್ದಾರೆ. ಇದೇ ತಿಂಗಳು 20ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿಗೆ ಚಾಲನೆ ಸಿಗುವ ಸಾಧ್ಯತೆ ಇದೆ.

ಗೃಹಲಕ್ಷ್ಮೀ ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರಕಿದ್ದು, ಬರೋಬ್ಬರಿ 1.3 ಕೋಟಿ ಫಲಾನುಭವಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಸ ವ್ಯಕ್ತಪಡಿಸಿದ್ದಾರೆ.

ಮನೆಯ ಯಜಮಾನಿ ಕೈಗೆ ಸಿಗುವ 2,000 ರೂಪಾಯಿ ಹಣ ಕುಟುಂಬ ನಿರ್ವಹಣೆಯ ಭಾರವನ್ನು ಇಳಿಸಲಿದೆ. ಇದು ಮಹಿಳಾ ಸಬಲೀಕರಣಕ್ಕೆ ಮಹತ್ತರ ಹೆಜ್ಜೆಯಾಗಲಿದೆ ಎಂದು ಟ್ವೀಟ್ ಮಾಡುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : ರಾಜಾರೋಷವಾಗಿ ‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಹಣ ವಸೂಲಿ

ಗ್ರಾಮೀಣ ಭಾಗದಲ್ಲಿ ಶೇ.80ರಷ್ಟು ನೋಂದಣಿ

ಗೃಹಲಕ್ಷ್ಮೀ ಯೋಜನೆ ಅಡಿ ಈಗಾಗ್ಲೇ ಶೇ.76ರಷ್ಟು ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇದರಲ್ಲಿ ಗ್ರಾಮೀಣ ಭಾಗದ ಜನ ಶೇ.80 ರಷ್ಟು ಹಾಗೂ ನಗರ ಭಾಗದ ಜನ ಶೇ.69ರಷ್ಟು ಜನ ನೋಂದಣಿ ಮಾಡಿಸಿಕೊಂಡಿದ್ದಾರೆ.

ಗೃಹಲಕ್ಷ್ಮೀಗೆ ಈಗಾಗಲೇ ಅರ್ಹ ಫಲಾನುಭವಿಗಳು ಜುಲೈ 19ರಿಂದ ಅರ್ಜಿ ಸಲ್ಲಿಸುತ್ತಿದ್ದಾರೆ. ಸದ್ಯ ಅರ್ಜಿ ಸಲ್ಲಿಸಲು ಯಾವುದೇ ಸಮಸ್ಯೆಯಿಲ್ಲ. ಹೀಗಾಗಿ, ಗ್ರಾಮ ಒನ್, ಬೆಂಗಳೂರು ಒನ್ ಸೇರಿದಂತೆ ಇತರೆ ಕೇಂದ್ರಗಳಲ್ಲಿ ಕ್ಯೂ ಇಲ್ಲದೆ ಅರ್ಜಿ ಸಲ್ಲಿಸುವಂತಾಗಿದೆ.

RELATED ARTICLES

Related Articles

TRENDING ARTICLES