Saturday, December 28, 2024

ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡುತ್ತಿದ್ದೀರಿ : ಸಿ.ಟಿ. ರವಿ

ಬೆಂಗಳೂರು : ತಮಿಳುನಾಡಿನ ರೈತರಿಗೆ ಕದ್ದುಮುಚ್ಚಿ ನೀರು ಬಿಡುತ್ತಿದ್ದೀರಿ. ಮೊದಲು ಮಂಡ್ಯ ರೈತರ ನಾಲೆಗಳಿಗೆ ನೀರು ಕೊಡಿ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಮಾಜಿ ಸಚಿವ ಸಿ.ಟಿ. ರವಿ ಕಿಡಿಕಾರಿದ್ದಾರೆ.

ಸ್ವತಂತ್ರ್ಯ ಉದ್ಯಾನದಲ್ಲಿ ಬೆಂಗಳೂರು ಮಹಾನಗರ ಬಿಜೆಪಿ ರೈತ ಮೋರ್ಚಾ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ನಿಮಗೆ ಕೇಂದ್ರ ಸರ್ಕಾರಕ್ಕೆ ಪೈಪೋಟಿ ನೀಡಬೇಕು ಎಂದಿದ್ದರೆ ಹೆಚ್ಚಿನ ಹಣ ನೀಡಿ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರಾಜ್ಯದ ಹಣ ಏಕೆ ನಿಲ್ಲಿಸಿದಿರಿ? ಇವತ್ತು ಕಾಂಟ್ರ್ಯಾಕ್ಟರ್ ಕೆಂಪಣ್ಣ ಪೇಚಾಡುತ್ತಿದ್ದಾರೆ. ಬಾಣಲೆ ತಿಂದ ಬೆಂಕಿಗೆ ಬಿದ್ದೆವು ಎನ್ನುತ್ತಿದ್ದಾರೆ ಎಂದು ಗುಡುಗಿದ್ದಾರೆ.

ಇದು ರೈತ ವಿರೋಧಿ ಸರ್ಕಾರ

ಇವತ್ತು ಚುನಾವಣೆ ನಡೆದರೆ ಕಾಂಗ್ರೆಸ್ ಸೋಲುತ್ತದೆ. ಸಿಎಂ ಸಿದ್ದರಾಮಯ್ಯ ಸೇರಿ ಅನೇಕರು ಸೋಲಲಿದ್ದಾರೆ. ಇದು ರೈತ ವಿರೋಧಿ ಸರ್ಕಾರ ಎಂದು ಸಿ.ಟಿ. ರವಿ ಆಕ್ರೋಶ ಹೊರಹಾಕಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ, ಶಾಸಕ ಛಲವಾದಿ ನಾರಾಯಣಸ್ವಾಮಿ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಉಪಾಧ್ಯಕ್ಷ ಲೋಕೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ನಾರಾಯಣ, ರೈತ ಮೋರ್ಚಾ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

RELATED ARTICLES

Related Articles

TRENDING ARTICLES