ಬೆಂಗಳೂರು : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಇಂದು ಮತ್ತೊಂದು ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.
ಚಂದ್ರಯಾನ-3 ಇಂದು ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರಕ್ಕೆ ಬಂದಿದೆ. ಈ ಕುರಿತು ಇಸ್ರೋ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಆಗಸ್ಟ್ 17 ರಂದು ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಲ್ಯಾಂಡರ್ ಮಾಡ್ಯೂಲ್ ಅನ್ನು ಬೇರ್ಪಡಿಸುವ ಪ್ರಕ್ರಿಯೆ ನಡೆಯಲಿದೆ.
ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಲ್ಯಾಂಡರ್ ಬೇರ್ಪಟ್ಟ ನಂತರ, ಆಗಸ್ಟ್ 23 ರಂದು ಸಂಜೆ 5.47 ಕ್ಕೆ ಲ್ಯಾಂಡರ್ ಅನ್ನು ಚಂದ್ರನ ಮೇಲ್ಮೈನ ದಕ್ಷಿಣ ಧ್ರುವದ ಬಳಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗುತ್ತದೆ. ಯಶಸ್ವಿ ಲ್ಯಾಂಡಿಂಗ್ ನಂತರ, ಮಿಷನ್ ಲ್ಯಾಂಡರ್ ಮತ್ತು ರೋವರ್ ಚಂದ್ರನ ಮೇಲ್ಮೈನಲ್ಲಿ ಒಂದು ಚಂದ್ರನ ದಿನ ಅಂದ್ರೆ 14 ಭೂಮಿಯ ದಿನಗಳವರೆಗೆ ಡೇಟಾವನ್ನು ಸಂಗ್ರಹಿಸುತ್ತದೆ.