Wednesday, January 22, 2025

ಭಕ್ತರ ಗಮನಕ್ಕೆ.. ಅಮರನಾಥ ಯಾತ್ರೆ ಸ್ಥಗಿತ

ಬೆಂಗಳೂರು : ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು, ಈ ಕಾರಣಕ್ಕೆ ಅಮರನಾಥ ಯಾತ್ರೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

ಭದ್ರತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಟಿ2(T2) ಮರೋಗ್ ರಾಂಬನ್ ಬಳಿ ಭೂಕುಸಿತ ಸಂಭವಿಸಿದೆ. ಪಂಥಾ ಚೌಕ್‌ ಬೇಸ್‌ ಕ್ಯಾಂಪ್‌ನಿಂದ ಜುಮ್ಮುವಿಗೆ ಯಾತ್ರೆಯನ್ನು ಸ್ಥಗಿತಗೊಳಿಸಲಾಗುವುದು.

ರಾಷ್ಟ್ರೀಯ ಹೆದ್ದಾರಿ ತೆರವುಗೊಳಿಸಿದ ನಂತರ ಯಾತ್ರೆಯನ್ನು ಪುನಾರಂಭ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಮಾಹಿತಿ ನೀಡಿರುವ ಜಮ್ಮು ಕಾಶ್ಮೀರ ಟ್ರಾಫಿಕ್‌ ಪೊಲೀಸರು, ರಾಮಬನ್‌ನ ಟಿ2 ಮಾರ್ಗದಲ್ಲಿ ಉಂಟಾಗಿರುವ ಭೂಕುಸಿತದಿಂದಾಗಿ ಕಾರಣ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಿದ್ದಾಗಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES