Wednesday, January 22, 2025

ರಾಹುಲ್ ಗಾಂಧಿ ವಿರುದ್ಧ ಶೋಭಾ ಕರಂದ್ಲಾಜೆ ದೂರು

ನವದೆಹಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿಯ ಇತರೆ ಸಂಸದೆಯರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ನೀಡಿದ್ದಾರೆ.

ಲೋಕಸಭೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಕಡೆ ಅಸಭ್ಯ ಹಾಗೂ ಅನುಚಿತ ವರ್ತನೆ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ರಾಹುಲ್ ಗಾಂಧಿ ಅವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಿಜೆಪಿಯ 21 ಮಹಿಳಾ ಸಂಸದರ ಸಹಿ ಇರುವ ಪತ್ರವನ್ನು ಸಚಿವೆ ಶೋಭಾ ಕರಂದ್ಲಾಜೆ ಅವರು ಸ್ಪೀಕರ್‌ಗೆ ಸಲ್ಲಿಸಿದ್ದಾರೆ.

ಸದಸ್ಯರೊಬ್ಬರ ಅಂತಹ ನಡವಳಿಕೆ ವಿರುದ್ಧ ಕಠಿಣ ಕ್ರಮಕ್ಕೆ ನಾವು ಕೋರುತ್ತೇವೆ. ಇದು ಸದನದಲ್ಲಿನ ಮಹಿಳಾ ಸಂಸದರ ಘನತೆಗೆ ಅವಮಾನ ಮಾಡಿರುವುದು ಮಾತ್ರವಲ್ಲ. ಈ ಸದನಕ್ಕೆ ಕೂಡ ಕೆಟ್ಟ ಹೆಸರು ತಂದಿದೆ ಮತ್ತು ಘನತೆಯನ್ನು ಕುಂದಿಸಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ರಾಗಾ ಫ್ಲೈಯಿಂಗ್ ಕಿಸ್

ರಾಹುಲ್ ಗಾಂಧಿ ಭಾಷಣದ ಬಳಿಕ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾತು ಆರಂಭಿಸಿದರು. ಸ್ಮೃತಿ ಇರಾನಿ ಮಾತು ಆರಂಭಿಸುತ್ತಿದ್ದಂತೆ ಲೋಕಸಭೆಯಿಂದ ನಿರ್ಗಮಿಸಲು ಮುಂದಾದ ರಾಹುಲ್ ಗಾಂಧಿ, ಹಾದಿ ಮಧ್ಯೆ ಕೆಲವು ಫೈಲ್ ಗಳನ್ನು ಕೆಳಗೆ ಬೀಳಿಸಿಕೊಂಡರು. ಈ ವೇಳೆ ಅದನ್ನು ಎತ್ತಿಕೊಳ್ಳಲು ಮುಂದಾದಾಗ ಅಲ್ಲೇ ಕೂತಿದ್ದ ಬಿಜೆಪಿ ಸಂಸದರು, ರಾಹುಲ್ ಗಾಂಧಿ ನೋಡಿ ನಗಲು ಆರಂಭಿಸಿದ್ದರು. ಇದನ್ನು ಗಮನಿಸಿದ ರಾಹುಲ್, ಅವರಿಗೆ ಫ್ಲೈಯಿಂಗ್ ಕಿಸ್ ನೀಡಿ ಮುಂದೆ ನಡೆದರು.

RELATED ARTICLES

Related Articles

TRENDING ARTICLES