ನವದೆಹಲಿ : 2024ರಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭವಿಷ್ಯ ನುಡಿದರು.
ಮಣಿಪುರ ಹಿಂಸಾಚಾರ ಸಂಬಂಧ ವಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ಅವರು ಲೋಕಸಭೆಯಲ್ಲಿ ಮಾತನಾಡಿದ ಅವರು, ‘2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ, ಬಿಜೆಪಿ ಎಲ್ಲಾ ದಾಖಲೆಗಳನ್ನು ಮುರಿದು ಮಹಾ ವಿಜಯದೊಂದಿಗೆ ಮರಳುತ್ತದೆ’ ಅಂತ ನೀವು ನಿರ್ಧರಿಸಿದ್ದೀರಿ.. ಎಂದು ವಾಗ್ದಾಳಿ ನಡೆಸಿದರು.
ವಿಪಕ್ಷಗಳ ಆಡುವ ಒಂದೊಂದು ಮಾತನ್ನು ದೇಶದ ಜನತೆ ನೋಡುತ್ತಿದ್ದಾರೆ. ವಿರೋಧ ಪಕ್ಷಗಳು ಸದಾ ನಿರಾಸೆಯಿಂದಲೇ ಮಾತನಾಡುತ್ತಿವೆ. ಕೇಂದ್ರ ಸರ್ಕಾರದ ಮೇಲೆ ದೇಶದ ಜನತೆಗೆ ವಿಶ್ವಾಸವಿದೆ. ಇದು ಕೇಂದ್ರ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯವಲ್ಲ. ಅವಿಶ್ವಾಸ ನಿರ್ಣಯ ಮಂಡಿಸಿದ್ದಕ್ಕೆ ವಿಪಕ್ಷಗಳಿಗೆ ಧನ್ಯವಾದಗಳು. ಎನ್‌ಡಿಎ ಬಲ ಇಂಡಿಯಾದ ಬಲ ಎಂದು ಚಾಟಿ ಬೀಸಿದರು.
ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ, ಒಂದು ವಿಚಿತ್ರ ಇದೆ. 1999ರಲ್ಲೂ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಶರದ್ ಪವಾರ್ ನೇತೃತ್ವದಲ್ಲಿ ಅವಿಶ್ವಾಸ ಮಂಡನೆ ಮಾಡಲಾಗಿತ್ತು. 2003ರಲ್ಲಿ ವಾಜಪೇಯಿ ಸರ್ಕಾರ ಇದ್ದಾಗಲೂ ಮಂಡಿಸಲಾಗಿತ್ತು. ಆಗ ಸೋನಿಯಾ ಗಾಂಧಿ ವಿಪಕ್ಷ ನಾಯಕರಾಗಿದ್ದರು. 2018ರಲ್ಲಿ ಮಲ್ಲಿಕಾರ್ಜುನ ಖರ್ಗೆ ವಿಪಕ್ಷ ನಾಯಕರಾಗಿದ್ದರು ಎಂದು ಹಳೇ ವಿಷಯವನ್ನು ಕೆದಕಿದರು.