Wednesday, January 22, 2025

ಬೈಕ್​ಗೆ ಬೊಲೆರೊ ಡಿಕ್ಕಿ : ಶನಿ ಮಹಾತ್ಮ ದೇವಸ್ಥಾನಕ್ಕೆ ಹೊರಟ್ಟಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ‌ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಗ್ರಾಮದ ಬಳಿ ಬೈಕ್​ಗೆ ಬೊಲೆರೊ ಪಿಕ್‌ಅಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ.

ಈಶ್ವರ್(16) ಯಶ್ವಂತ್ (17) ಎಂಬ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ.

ಶನಿವಾರವಾದ ಹಿನ್ನೆಲೆ ಪಾವಗಡದ ಶನಿ ಮಹಾತ್ಮ ದೇವಸ್ಥಾನಕ್ಕೆ ಹೊರಟ್ಟಿದ್ದ ವೇಳೆ ಅಪಘಾತ ಸಂಭವಿಸಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್‌ಗೆ ರವಾನಿಸಲಾಗಿದೆ. ವಿದ್ಯಾರ್ಥಿಗಳು ಆಂಧ್ರಪ್ರದೇಶದ ರೊದ್ದಂ ಮಂಡಲದ ಚಿನ್ನಿಕೊಡಿಪಲ್ಲಿ ಗ್ರಾಮದವರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : KSRTC ಬಸ್ ಡ್ರೈವರ್​ಗೆ ಪಂಚ್ ಕೊಟ್ಟ ಯುವಕ : ಮುಂದೇನಾಯ್ತು?

ಕಲುಷಿತ ನೀರು ಸೇವನೆ ಶಂಕೆ

ಚಿತ್ರದುರ್ಗ ತಾಲೂಕಿನ ಮುದ್ದಾಪುರ ಹೊಸಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಚಿತ್ರದುರ್ಗ ಕವಾಡಿಗರಹಟ್ಟಿ ದುರಂತ ಬಳಿಕ ಮತ್ತೊಂದು ಘಟನೆ ಸಂಭವಿಸಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ಚಿತ್ರದುರ್ಗ ಎಸಿ ಕಾರ್ತಿಕ್, ತಹಶೀಲ್ದಾರ್ ನಾಗವೇಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.

RELATED ARTICLES

Related Articles

TRENDING ARTICLES