ಬೆಂಗಳೂರು : ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಅವಘಡ ವಿಚಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವ ಜಾಗದಲ್ಲಿ ಕ್ವಾಲಿಟಿ ಕಂಟ್ರೋಲ್ನ ಇಟ್ಟಿದ್ರೋ ಆ ಜಾಗ ಸರಿಯಿಲ್ಲ. ಈ ಬಗ್ಗೆ ತನಿಖೆ ನಡೆಸಲು ಹೇಳಿದ್ದೇನೆ ಎಂದು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಟ್ವೀಟ್ನಲ್ಲಿ ಬಿಜೆಪಿ ಮೇಲೆ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾವ ಹುಡುಗ್ರು ಮಾಡಿದ್ದಾರೋ ಗೊತ್ತಿಲ್ಲ. ನಾನು ಸಿಟಿಯಲ್ಲಿ ಇರಲಿಲ್ಲ. ಮೊದಲು ನಾನೇ ಚೆಕ್ ಮಾಡ್ತಿದ್ದೆ. ಈಗ ವಾಪಸ್ ತಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಕಿ ಅವಘಡದ ಬಗ್ಗೆ ತನಿಖೆ ಚುರುಕು
ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿ ಮೂರು ಹಂತಗಳಲ್ಲಿ ತನಿಖೆ ಆರಂಭವಾಗಿದೆ. ಡಿಸಿಪಿ ನೇತೃತ್ವದಲ್ಲಿ ಪೊಲೀಸ್ ತನಿಖೆ, ಎಲೆಕ್ಟ್ರಿಕಲ್ ಇಂಜಿನಿಯರ್ ನೇತೃತ್ವದಲ್ಲಿ ಮತ್ತೊಂದು ತನಿಖೆ ಹಾಗೂ ಬಿಬಿಎಂಪಿ ಪ್ರಧಾನ ಅಭಿಯಂತರರ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಬಿಬಿಎಂಪಿ ಕಾಮಗಾರಿಗಳ ಗುಣಮಟ್ಟ ತನಿಖೆಗೆ SIT ರಚಿಸಲಾಗಿದೆ.