Wednesday, January 22, 2025

ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಶಾಸಕ

ಕೊಪ್ಪಳ : ಸಚಿವರು ಹಾಗೂ ಶಾಸಕರ ನಡುವಿನ ಅಸಮಾಧಾನ, ಶಾಸಕರುಗಳ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ವಿಚಾರ ಕಾಂಗ್ರೆಸ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

ಈ ಮಧ್ಯಯೇ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಕೊಪ್ಪಳದಲ್ಲಿ ಹೇಳಿದ್ದಾರೆ.

ಇದೇ ನನ್ನ ಕೊನೆಯ ಚುನಾವಣೆ ಆಗಬಹುದು. ನನಗೆ ಇಂದಿನ ರಾಜಕಾರಣ ಒಗ್ಗುತ್ತಿಲ್ಲ. ಚುನಾವಣಾ ವ್ಯವಸ್ಥೇಯೇ ಸರಿಯಾಗಿಲ್ಲ. ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದರೂ ಜನರು ನನ್ನನ್ನು ಸೋಲಿಸುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇಂದಿನ ಔತಣಕೂಟಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಈ ಹಿಂದೆಯೂ ನಾನು ಹಲವು ಬಾರಿ ಔತಣಕೂಟ ಆಯೋಜನೆ ಮಾಡಿದ್ದೆ ಎಂದು ಇದೇ ವೇಳೆ ಬಸವರಾಜ ರಾಯರೆಡಗಡಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES