Monday, December 23, 2024

WI vs IND T-20 : ಟಾಸ್ ಸೋತ ಭಾರತ, ಗೆದ್ದರೆ ಸರಣಿ ಸಮಬಲ

ಬೆಂಗಳೂರು : ಟೀಂ ಇಂಡಿಯಾ ವಿರುದ್ಧದ 4ನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್​ ಇಂಡೀಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಲಾಡರ್​ಹಿಲ್​ನಲ್ಲಿ ಪಂದ್ಯ ನಡೆಯುತ್ತಿದ್ದು, ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 3ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಬಳಗವನ್ನೇ ಮುಂದುವರಿಸಲಾಗಿದೆ.

ಇಂದಿನ ಪಂದ್ಯ ಟೀಂ ಇಂಡಿಯಾ ಪಾಲಿಗೆ ‘ಮಾಡು ಇಲ್ಲವೆ ಮಡಿ’ ಪಂದ್ಯ. ಈ ಪಂದ್ಯ ಗೆದ್ದರೆ ಭಾರತ ಸರಣಿಯಲ್ಲಿ 2-2ರಿಂದ ಸಮಬಲ ಕಾಯ್ದುಕೊಳ್ಳಲಿದೆ. ಒಂದು ವೇಳೆ ವೆಸ್ಟ್​ ಇಂಡೀಸ್​ ಗೆದ್ದರೆ ಅತಿಥೇಯ ತಂಡ ಸರಣಿ ಗೆಲ್ಲಲಿದೆ.

5 ಪಂದ್ಯಗಳ ಟಿ-20 ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ವಿಂಡೀಸ್ ಗೆದ್ದಿದೆ. 3ನೇ ಪಂದ್ಯವನ್ನು ಭಾರತ ಗೆದ್ದಿದೆ. ಹೀಗಾಗಿ, ಇಂದು ನಡೆಯುತ್ತಿರುವ 4ನೇ ಪಂದ್ಯ ಹಾರ್ದಿಕ್ ಪಾಂಡ್ಯ ಪಡೆಗೆ ನಿರ್ಣಾಯಕವಾಗಲಿದೆ.

ಭಾರತ ತಂಡ

ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್ (ವಿ.ಕೀ.), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಚಹಲ್, ಮುಖೇಶ್ ಕುಮಾರ್

ವೆಸ್ಟ್ ಇಂಡೀಸ್ ತಂಡ

ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್ (ವಿ.ಕೀ.), ರೋವ್‌ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ರೊಮಾರಿಯೊ ಶೆಫರ್ಡ್, ಓಡಿಯನ್ ಸ್ಮಿತ್, ಅಕೇಲ್ ಹೋಸೇನ್, ಒಬೆಡ್ ಮೆಕಾಯ್

RELATED ARTICLES

Related Articles

TRENDING ARTICLES