Saturday, May 18, 2024

IND vs WI ಫೈನಲ್ ಫೈಟ್ : ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಬೆಂಗಳೂರು : ವೆಸ್ಟ್ ಇಂಡೀಸ್ ವಿರುದ್ಧದ 5ನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಪೋರ್ಟ್​ ಲಾಡರ್​ ನಲ್ಲಿ ನಡೆಯುವ ಈ ಪಂದ್ಯ ಸರಣಿ ನಿರ್ಣಾಯಕವಾಗಲಿದೆ. 3 ಮತ್ತು 4ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಬಗ್ಗುಬಡಿದಿರುವ ಹಾರ್ದಿಕ್ ಪಾಂಡ್ಯ ಪಡೆ ಆತ್ಮವಿಶ್ವಾಸದಿಂದ ಬೀಗುತ್ತಿದೆ.

5 ಪಂದ್ಯಗಳ ಟಿ-20 ಸರಣಿಯಲ್ಲಿ ವೆಸ್ಟ್ ಇಂಡೀಸ್ ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತ್ತು. ತಿರುಗಿ ಬಿದ್ದ ಭಾರತ ಸತತ ಎರಡು ಪಂದ್ಯ ಗೆದ್ದು ಕಂ ಬ್ಯಾಕ್ ಮಾಡಿದೆ. ಇದೀಗ, 2-2 ರಿಂದ ಸರಣಿ ಸಮಬಲ ಸಾಧಿಸಿದ್ದು, ಇಂದು ಗೆಲ್ಲುವ ತಂಡ ಸರಣಿ ಕೈವಶ ಮಾಡಿಕೊಳ್ಳಲಿದೆ.

ಭಾರತ ತಂಡ

ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್ (ವಿ.ಕೀ.), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಚಹಲ್, ಮುಖೇಶ್ ಕುಮಾರ್

ವೆಸ್ಟ್ ಇಂಡೀಸ್ ತಂಡ

ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ರೊಮಾರಿಯೊ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಝಾರಿ ಜೋಸೆಫ್

RELATED ARTICLES

Related Articles

TRENDING ARTICLES