ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಅಕ್ರಮ ಬಯಲಾಗಿದೆ. ಮಂಗಳೂರು ಜಿಲ್ಲೆಯಲ್ಲಿ MBBS ಮೆಡಿಕಲ್ ಸೀಟ್ ಹೆಸರಿನಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜು ಹೆಸರಿನಲ್ಲಿ ಸರ್ಕಾರದ ಅನುಮತಿಯನ್ನೇ ಪಡೆಯದೆ ನೂರಾರು ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ಮಾರಾಟ ಮಾಡಿದ ಆರೋಪ ಕೇಳಿ ಬಂದಿದೆ. ಸದ್ಯ ಈಗ ಈ ಬಗ್ಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಸಮಗ್ರ ತನಿಖೆಗೆ ಸೂಚಿಸಿದೆ.
ಈ ಪ್ರಕರಣವನ್ನು ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಪತ್ರ ಬರೆದಿದೆ. ಮಂಗಳೂರಿನ ನೀರುಮಾರ್ಗದಲ್ಲಿ ಎರಡು ವರ್ಷಗಳ ಹಿಂದೆ ಜಿ.ಆರ್.ಮೆಡಿಕಲ್ ಕಾಲೇಜು ಆರಂಭವಾಗಿತ್ತು. ಈಗ ಲಕ್ಷಾಂತರ ಶುಲ್ಕ ತೆತ್ತು ಪ್ರವೇಶ ಪಡೆದ 150 ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.
ಕಾನೂನು ಬಾಹಿರವಾಗಿ 150 ಮಂದಿಗೆ ಸೀಟು ಹಂಚಿಕೆ ಮಾಡಲಾಗಿದೆ. ಕೋಟ್ಯಂತರ ರೂಪಾಯಿ ಶುಲ್ಕ ಪಡೆದು ಸೀಟು ಹಂಚಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.