Sunday, January 19, 2025

ಗ್ರಾಪಂ ಅಧ್ಯಕ್ಷ ಸ್ಥಾನಕ್ಕಾಗಿ ಕಟ್ಟಿಗೆ, ಕಲ್ಲು ಹಿಡಿದು ಡಿಶುಂ.. ಡಿಶುಂ..!

ಕೊಪ್ಪಳ : ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೂದಗುಂಪಾ ಗ್ರಾಮದಲ್ಲಿ ನಡೆದಿದೆ.

ಎರಡು ಗುಂಪುಗಳು ಕಟ್ಟಿಗೆ, ಕಲ್ಲುಗಳಿಂದ ಪರಸ್ಪರ ಹೊಡೆದಾಡಿಕೊಂಡಿವೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಬೂದಗುಂಪಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಎಸ್​​ಟಿ ಮೀಸಲಾತಿ ಬಂದಿತ್ತು. ಇದನ್ನು ಪ್ರಶ್ನಿಸಿ ಇತರೆ ಸಮುದಾಯಗಳು ಕೋರ್ಟ್ ಮೆಟ್ಟಿಲೇರಿದ್ದವು. ಈ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ವಾಗ್ವಾದ ವಿಕೋಪಕ್ಕೆ ತಿರುಗಿ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದೆ.

ಸದ್ಯ ಕೊಪ್ಪಳ ಎಸ್​ಪಿ, ಐಜಿಪಿ ಬೂದಗುಂಪಾ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಗಲಾಟೆ ಸಂಬಂಧ ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್​ಪಿ ನೇತೃತ್ವದಲ್ಲಿ ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.

RELATED ARTICLES

Related Articles

TRENDING ARTICLES