Friday, December 27, 2024

ನಟ ಉಪೇಂದ್ರ ವಿರುದ್ದ ಕ್ರಮ ಕೈಗೊಳ್ಳಲಾಗುವುದು : ಸಚಿವ ಹೆಚ್​.ಸಿ ಮಹದೇವಪ್ಪ ಟ್ವೀಟ್​

ಬೆಂಗಳೂರು : ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯಕ್ಕೆ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ ಎಂದು ಹೆಚ್​.ಸಿ ಮಹದೇವಪ್ಪ ನಟ ಉಪೇಂದ್ರ ಹೇಳಿಕೆ ವಿರುದ್ದ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ಟ್ವೀಟ್​ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ. ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯಕ್ಕೆ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ.

ಇದನ್ನೂ ಓದಿ: ಬಂಧನದ ಭೀತಿಯಲ್ಲಿ ನಾಪತ್ತೆಯಾದ ನಟ ಉಪೇಂದ್ರ!

ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರುವ ಅವರು ಈ ದೇಶದ ಅಸಮಾನತೆ ಮತ್ತು ನೋವಿನ ಚರಿತ್ರೆಯನ್ನೇ ತಿಳಿಯದಿದ್ದ ಮೇಲೆ ಇವರ ಸಮಾಜ ಬದಲಾಯಿಸುವಂತಹ ಮಾತುಗಳಿಗೆ ಯಾವ ಅರ್ಥವಿಲ್ಲ ಎಂದು ಸಹಜವಾಗಿ ಅನಿಸುತ್ತಿದೆ.

ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಶೋಷಿತ ಸಮುದಾಯಗಳನ್ನು Taken for granted ಆಗಿ ಉಲ್ಲೇಖಿಸುವ ಈ ಉಪೇಂದ್ರರ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು.

RELATED ARTICLES

Related Articles

TRENDING ARTICLES