Tuesday, August 26, 2025
Google search engine
HomeUncategorizedಕಾವೇರಿ ವಿವಾದ: ಸಿಎಂಗೆ ಪತ್ರ ಬರೆದ ಮಾಜಿ ಸಿಎಂ ಬೊಮ್ಮಾಯಿ

ಕಾವೇರಿ ವಿವಾದ: ಸಿಎಂಗೆ ಪತ್ರ ಬರೆದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ಕಾವೇರಿ ನೀರು ವಿಚಾರವಾಗಿ ನೆರೆಯ ತಮಿಳುನಾಡು ಮತ್ತೆ ಖ್ಯಾತೆ ಮುಂದುವರೆಸಿದ್ದು ನಿತ್ಯ ಬಿಡುಗಡೆಯಾಗಲಿರುವ ನೀರಿನ ಪ್ರಮಾಣವನ್ನು ಹೆಚ್ಚಿಸುವಂತೆ ಕೋರಿ ತಮಿಳುನಾಡು ಜಲಸಂಪನ್ಮೂಲ ಸಚಿವರು ಸುಪ್ರೀಕೊಂರ್ಟ್​ ಮೆಟ್ಟಿಲೇರುವುದಾಗಿ ಘೋಷಣೆ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬರೆದಿರುವ ಪತ್ರದಲ್ಲಿ,

ತಮಿಳುನಾಡು ಸರ್ಕಾರ  ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿರುವುದು ನಿಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇನೆ ಹಾಗೂ ತಮಿಳುನಾಡು ಸುಪ್ರಿಂ ಕೋರ್ಟ್ ಗೆ ಹೋಗಬಹುದೆಂದು ಮಾಧ್ಯಮದಲ್ಲಿ ನಾವು ನೋಡಿದ್ದೇವೆ. ಈ ವಿಚಾರದಲ್ಲಿ ಕೆಳಕಂಡ ಮಹತ್ವದ ವಾಸ್ತವಿಕ ಅಂಶಗಳನ್ನು ಇಟ್ಟುಕೊಂಡು ಬರುವ ದಿನಗಳಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ನಾನು ಈ ಪತ್ರ ಬರೆಯುತ್ತಿದ್ದೇನೆ‌.

ಜೂನ್ 1 ರಂದು ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಒಟ್ಟು 24.352 ಟಿಎಂಸಿ ನೀರಿತ್ತು. ಅದೇ ರೀತಿ ಮೆಟ್ಟೂರು ಜಲಾಶಯದಲ್ಲಿ 69.77 ಟಿಎಂಸಿ, ಭವಾನಿ ಸಾಗರ ಜಲಾಶಯದಲದಲಿ 16.653 ಟಿಎಂಸಿ ಇದ್ದು, ಬಿಳಿಗುಂಡ್ಲು ಮಾಪನ ಕೇಂದ್ರದಿಂದ 6-8-2023 ಕ್ಕೆ 14.054 ಟಿಎಂಸಿ ನೀರು ಹೋಗಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಒಟ್ಟು ತಮಿಳುನಾಡಿದ ಮೆಟ್ಟೂರು ಡ್ಯಾಮನಲ್ಲಿ ಈ ವರ್ಷ 83.831ಟಿಎಂಸಿ ನೀರು ಬಂದಿರುತ್ತದೆ.

ತಮಿಳುನಾಡು ಕುರುವೈ ಬೆಳೆಗೆ 1 ಲಕ್ಷ ಎಂಬತ್ತು ಸಾವಿರ ಎಕರೆ ಬೆಳೆ ಸಿಡಬ್ಲುಡಿಟಿ ಪಕ್ರಾರ ಬೆಲೆಯಬೇಕು ಹಾಗೂ  32 ಟಿಎಂಸಿ ನೀರು ಬಳಸಬೇಕು. ಆದರೆ, ತಮಿಳುನಾಡು 7-8-23 ಕ್ಕೆ 60.97 ಟಿಎಂಸಿ ನೀರು ಕುರುವೈ ಬೆಳೆಗೆ ಬಳಕೆ ಮಾಡಿದ್ದು ಸಿಡಬ್ಲುಡಿಟಿ ಆದೇಶದ ಎರಡು ಪಟ್ಡು  ಹೆಚ್ಚಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದನ್ನು ‌ಲೆಕ್ಕಿಸದೇ ಸಿಡಬ್ಲುಡಿಟಿ ಆದೇಶ ಉಲ್ಲಂಘನೆ ಮಾಡಿ ನಾಲ್ಕು ಪಟ್ಡು ಕುರುವೈ ಏರಿಯಾ ಬೆಳೆಗೆ ನೀರನ್ನು ಒದಗಿಸಿದೆ. ಇದನ್ನು ನಮ್ಮ ಅಧಿಕಾರಿಗಳು ಸಿಡಬ್ಲುಎಂಎ ದಲ್ಲಿ ಪ್ರತಿಭಟಿಸದೇ ಸುಮ್ಮನೆ ಇದ್ದದ್ದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ.

ಈಗಿರುವ ನಮ್ಮ ನಾಲ್ಕು ಡ್ಯಾಮ್ ಗಳ ನಿರಿನ ಮಟ್ಟ ಬೆಂಗಳೂರು ನಗರ, ಕಾವೇರಿ ಜಲಾನಯನ ಪ್ರದೇಶದ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೆ ಕೊರತೆಯಾಗುತ್ಗದೆ. ಅದೇ ರೀತಿ ಕಾವೇರಿ ‌ಜಲಾನಯನ ಪ್ರದೇಶದ ಕರೀಫ್ ಬೆಳೆಗಳಿಗೆ ನಿರಿನ ಕೊರತೆಯಾಗುತ್ತದೆ. ಹೀಗಾಗಿ ನೀರು ಬಿಡುವುದು ಕರ್ನಾಟಕದ ಜನತೆ ಮತ್ತು ರೈತರನ್ನು ಸಂಕಷ್ಟಕ್ಕೆ ಈಡು ಮಾಡುತ್ತದೆ.

ತಮಿಳುನಾಡಿಗೆ ಸೌಥ್ ವೆಸ್ಟ್ ಮತ್ತು ನಾರ್ಥ್  ಈಸ್ಟ್ ಮಾನಸೂನ್ ಮಳೆ ಆಗುತ್ತಿರುವುದರಿಂದ ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಈ ವಾಸ್ತವಾಂಶದ ಮೇಲೆ ನಾವು ಗಟ್ಟಿ ನಿಲುವು ತೆಗೆದುಕೊಳ್ಳಬೇಕೆಂದು ನಾನು ತಮ್ಮಲ್ಲಿ ಆಗ್ರಹ ಮಾಡುತ್ತೇನೆ.  ಹಾಗು ತಾವು ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡುತ್ತೀರೆಂದು ನಂಬಿರುವೆ. ಬರೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments