Monday, January 6, 2025

ಆನೆ ಹೋಗ್ತಿರುತ್ತೆ, ನರಿ ಅದೆನೋ ಬೀಳುತ್ತೆ ಅಂತ ಕಾಯ್ತಿರುತ್ತೆ : ಸಚಿವ ಮಹದೇವಪ್ಪ

ಮೈಸೂರು : ಆರು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಚಿವ ಡಾ.ಹೆಚ್.ಸಿ ಮಹದೇವಪ್ಪ ತಿರುಗೇಟು ಕೊಟ್ಟಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೆ ಹೋಗುತ್ತಿರುತ್ತದೆ, ನರಿ ಅದೆನೋ ಬೀಳುತ್ತದೆ ಅಂತ ಕಾಯುತ್ತಿರುತ್ತದೆ. ಬಿಜೆಪಿಯವರ ಪಾಡು ಈ ರೀತಿಯಾಗಿದೆ ಎಂದು ಮಾರ್ಮಿಕವಾಗಿಯೇ ಟಾಂಗ್ ಕೊಟ್ಟಿದ್ದಾರೆ.

ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತಿದೆ. ಅದನ್ನು ಕೆಡಿಸಲು ಈ ರೀತಿ ಹೇಳಿಕೆಗಳನ್ನು ಹರಿಬಿಡುತ್ತಿದ್ದಾರೆ. ರಾಜ್ಯ ಸರ್ಕಾರ ಸುಭದ್ರವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿಯವರ ಆಪರೇಷನ್ ಕಮಲ ಯಾವುದು ನಡೆಯುವುದಿಲ್ಲ. ಅಂತಹ ಅಪರೇಷನ್ ನಡೆಸಿದ್ದಕ್ಕೆ ಅವರಿಗೆ ಇವತ್ತು ಈ ಸ್ಥಿತಿ ಬಂದಿದೆ. ಇಲ್ಲಿ ಬಿಜೆಪಿಯ ಯಾವ ಆಟವೂ ನಡೆಯುವುದಿಲ್ಲ ಎಂದು ಸಚಿವ ಮಹದೇವಪ್ಪ ಕುಟುಕಿದ್ದಾರೆ.

RELATED ARTICLES

Related Articles

TRENDING ARTICLES