Wednesday, January 22, 2025

ಶೀಘ್ರವೇ ಲೋಕಸಭೆ ಆಕಾಂಕ್ಷಿಗಳ ಪಟ್ಟಿ ತಯಾರು : ಡಾ.ಬಿ.ಎಸ್ ಯಡಿಯೂರಪ್ಪ

ಶಿವಮೊಗ್ಗ : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿ ಶೀಘ್ರವೇ ತಯಾರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಿಂದಿನ ಚುನಾವಣೆಯಂತೆ ಈ ಬಾರಿ ಚುನಾವಣೆಯಲ್ಲಿಯೂ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಸಂಸದ ಬಿ.ವೈ ರಾಘವೇಂದ್ರ ಅವರ ಹುಟ್ಟುಹಬ್ಬದ ಕಾರ್ಯಕ್ರಮಕ್ಕಾಗಿ ಶಿವಮೊಗ್ಗಕ್ಕೆ ಬಂದಿದ್ದೇವೆ. ಕಾಂಗ್ರೆಸ್ ಸರ್ಕಾರದ ಬಗ್ಗೆ ಒಂದಾದ ಮೇಲೆ ಒಂದರಂತೆ, ಮಂತ್ರಿಗಳ ಮೇಲೆ ಭ್ರಷ್ಟಾಚಾರದ ಆರೋಪ ಬರುತ್ತಿವೆ. ಯಾವ ಮಂತ್ರಿಗಳ ಮೇಲೆ ಭ್ತಷ್ಟಾಚರದ ಆರೋಪವಿದೆ ಅವರ ವಿರುದ್ಧ ತನಿಖೆ ಮಾಡಬೇಕು. ತಪ್ಪು ಮಾಡಿರುವುದು ತಿಳಿದು ಬಂದರೆ ಸಂಪುಟದಿಂದ ಕೈಬಿಡಬೇಕು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : 6 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ : ಯತ್ನಾಳ್ ಭವಿಷ್ಯ

ಕಾಂಗ್ರೆಸ್ ಸರ್ಕಾರಕ್ಕೆ ಅಸ್ಥಿರತೆ ಕಾಡುತ್ತಿದೆ

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮೇಲೆ ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ರಾಜ್ಯದ ಮಂತ್ರಿಗಳ ಮೇಲೆ ನಿರಂತರವಾಗಿ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ ಎಂದು ಕುಟುಕಿದ್ದಾರೆ.

ಕಾಂಗ್ರೆಸ್ ಸರ್ಕಾರ ಇನ್ನು 6 ತಿಂಗಳಲ್ಲಿ ಬೀಳಲಿದೆ ಎಂಬ ಶಾಸಕ ಯತ್ನಾಳ ಹೇಳಿಕೆ ವಿಚಾರ‌ವಾಗಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅಸ್ಥಿರತೆ ಕಾಡಲಾರಂಭಿಸಿದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES