Wednesday, January 22, 2025

ಅವರ ಪಾಪದ ದುಡ್ಡಿನಲ್ಲಿ ವಿದೇಶಕ್ಕೆ ಹೋಗಲಾ? ಸಚಿವರಿಗೆ ಹೆಚ್.ಡಿ.ಕೆ ತಿರುಗೇಟು

ಬೆಂಗಳೂರು: ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಹೇಳಿದ್ದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತಿರುಗೇಟು ನೀಡಿದ್ದಾರೆ.

ಕಳೆದ ತಡರಾತ್ರಿ ವಿದೇಶಿ ಪ್ರವಾಸದಿಂದ ಬೆಂಗಳೂರು ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು, ಇಲ್ಲಿ ಲೂಟಿ ಹೊಡೆಯೋಕೆ ನಮ್ಮನ್ನ ಬಿಟ್ಬಿಡಿ, ನೀವು ವಿದೇಶದಲ್ಲಿ ಇರಿ ಅಂತ ಸಲಹೆ ಕೊಟ್ಟ ಹಾಗಿದೆ. ಏಕೆಂದರೆ, ಮಾನ ಮಾರ್ಯಾದೆ ಇಲ್ಲದೆ ಇಲ್ಲಿ ದರೋಡೆ ಮಾಡಿಕೊಂಡು ಕೂತಿದ್ದಾರೆ. ನಾನು ಇಲ್ಲಿದ್ದರೆ ಅವರಿಗೆ ಆಗ್ತೀನಿ ಅಲ್ಲವೇ? ಎಂದರು.

ಇದನ್ನೂ ಓದಿ: ಬಂಧನದ ಭೀತಿಯಲ್ಲಿ ನಾಪತ್ತೆಯಾದ ನಟ ಉಪೇಂದ್ರ!

ವಿದೇಶಿ ಪ್ರವಾಸಕ್ಕೆ ಅವರಿಂದ ವ್ಯವಸ್ಥೆ ಮಾಡಿಸಿಕೊಂಡು ಹೋಗಬೇಕಾ ನಾನು? ಆ ಪಾಪದ ಹಣ ತಗೊಂಡು ಹೋಗಬೇಕಾ? ವಿದೇಶಕ್ಕೆ ಹೋಗುವ ಯೋಗ್ಯತೆಯೂ ನನಗಿಲ್ಲವೇ? ಕಳೆದ 12 ವರ್ಷದಿಂದ ಪಕ್ಷದ ಸಂಘಟನೆಗೆ ಸಮಯ ಮೀಸಲಿಟ್ಟಿದ್ದೆ. ಎಲ್ಲೂ ಹೊರಗೆ ಹೋಗಿ ಬರುವ ಅವಕಾಶ ಸಿಕ್ಕಿರಲಿಲ್ಲ. ದೇಶ ಸುತ್ತು, ಕೋಶ ಓದು ಅಂತಾ ಹಿರಿಯರ ಮಾತಿದೆ. ಯಾವ ದೇಶದಲ್ಲಿ ಏನೇನಿದೆ ಅಂತಾ ತಿಳ್ಕೊಬೇಕಲ್ಲಾ? ಅಲ್ಲಿ ಯಾವ ರೀತಿ ಇದೆ, ನಮ್ಮಲ್ಲಿ ಯಾವ ರೀತಿ ಇದೆ ನೋಡಬೇಕಲ್ಲಾ. ಕಾಂಬೋಡಿಯಾಗೆ ಸ್ನೇಹಿತರ ಆಹ್ವಾನ ಇತ್ತು, ಹೋಗಿದ್ದೆ.

ಅಲ್ಲಿನ ಸುವಿಶಾಲ ಪ್ರದೇಶದಲ್ಲಿ ಕಟ್ಟಿರುವ ಆಂಕರ್ ವಾಟ್ ಎಂಬ ಅದ್ಭುತವಾದ ದೇವಸ್ಥಾನ ಇದೆ. ನಮ್ಮ ದೇಶದಲ್ಲೂ ಇಲ್ಲ ಅಂತ ದೇವಸ್ಥಾನ. ಬ್ರಹ್ಮ, ವಿಷ್ಣು, ಮಹೇಶ್ವರ ತ್ರಿಮೂರ್ತಿಗಳು ಇರುವ ದೇವಸ್ಥಾನ. ಅದನ್ನು ಕಂಡು ನಾನು ವಿಸ್ಮಿನಾದೆ ಎಂದರು ಮಾಜಿ ಮುಖ್ಯಮಂತ್ರಿಗಳು.

ಇತ್ತೀಚಿಗೆ ಆ ದೇಶ ಆರ್ಥಿಕವಾಗಿ ವೇಗವಾಗಿ ಬೆಳೆಯುತ್ತಿದೆ. ಒಂದು ಕಾಲದಲ್ಲಿ ಭಾರೀ ಸಂಕಷ್ಟದಲ್ಲಿ ಇದ್ದ ಆ ದೇಶ ಈಗ ತುಂಬ ಅದ್ಭುತವಾಗಿ ಬೆಳೆಯುತ್ತಿದೆ. ಕಾಂಬೋಡಿಯಾದ ಜಿಡಿಪಿ ಶೇ.7.7 ರಷ್ಟಿದೆ ಎಂದು ಅಲ್ಲಿನ ಮಂತ್ರಿಗಳೊಬ್ಬರು ಹೇಳಿದರು. ಸಾರ್ವಜನಿಕರ ಹಣದ ವಿನಿಯೋಗದ ಬಗ್ಗೆ ಅಲ್ಲಿ ಕಠಿಣ ನಿಯಮಗಳಿವೆ. ನಮ್ಮಲ್ಲಿ ಹಣಕ್ಕೆ ಕೊರತೆ ಇಲ್ಲ, ಈಗ ಲೂಟಿ ಮಾಡ್ತಾ ಇದ್ದಾರೆ ಇವರು ಎಂದು ಮಾಜಿ ಮುಖ್ಯಮಂತ್ರಿ ಅವರು ಟೀಕಾ ಪ್ರಹಾರ ನಡೆಸಿದರು.

ಈಗ ಮಧ್ಯಪ್ರದೇಶದಲ್ಲಿಯೂ 40% ಸರ್ಕಾರ ಅಂತಾ ಹೇಳಿ ಪೋಸ್ಟರ್ ಹಾಕ್ಕೊಂಡಿದ್ದಾರೆ. ಈ ದೇಶವನ್ನು ಇವರು ಎಲ್ಲಿಗೆ ತಗೊಂಡು ಹೋಗ್ತಿದ್ದಾರೆ? ಎಂದು ಅವರು ಕಿಡಿಕಾರಿದರು.

RELATED ARTICLES

Related Articles

TRENDING ARTICLES