ತುಮಕೂರು : ಜಿಲ್ಲೆಯಲ್ಲಿ ಹಾಡಹಗಲಲ್ಲೇ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು ಘಟನೆ ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರ್ವೆ ನಂ. 42ರಲ್ಲಿ ಹೆಚ್ಚಾದ ಅಕ್ರಮ ಕಲ್ಲು ಗಣಿಗಾರಿಕೆ ಕುರಿತು ಯಾರು ಎಲ್ಲಿ ಗಣಿಗಾರಿಕೆಯನ್ನು ಮಾಡಿದರೂ ಹೇಳೋರಿಲ್ಲ ಕೇಳೋರಿಲ್ಲ ಎಂಬ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : ವಾಲ್ಮೀಕಿ ಮಠದಲ್ಲಿ ಕಾರು ಚಾಲಕನ ಅಸಭ್ಯ ವರ್ತನೆ
ಹಾಡುಹಗಲಲ್ಲೇ ಎಗ್ಗಿಲ್ಲದೇ ಬೃಹತ್ ಲಾರಿಗಳಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ. ಅತ್ಯಂತ ಹೆಚ್ಚು ಬೆಲೆಬಾಳುವ ಕಲ್ಲುಗಳ ಅಕ್ರಮ ಸಾಗಾಟ ನೆಡೆಯುತ್ತಿದ್ದು, ಸರ್ಕಾರಕ್ಕೆ ಅಪಾರ ನಷ್ಟವಾಗತ್ತಿದ್ದರು ಕ್ಯಾರೆ ಎನ್ನದ ಅಧಿಕಾರಿಗಳು. ಅಷ್ಟೇ ಅಲ್ಲದೆ ಕಲ್ಲು ಗಣಿಗಾರಿಕೆಯಿಂದ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯದಿಂದ ಗ್ರಾಮಸ್ಥರು ನೆಮ್ಮದಿಯಿಂದ ಬದುಕಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗುತ್ತಿದೆ.
ಈ ಘಟನಾ ಹಿನ್ನೆಲೆ ಜಿಲ್ಲಾಡಳಿತ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕೊತ್ತಗೆರೆ ಗ್ರಾಮಸ್ಥರು.