Friday, December 27, 2024

Scorpio ಕಾರಲ್ಲಿ ಬಂದು ಜಾನುವಾರುಗಳ ಕಳವು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಶಿವಮೊಗ್ಗ : ಸ್ಕಾರ್ಪಿಯೋ(Scorpio) ಕಾರಿನಲ್ಲಿ ಆಗಮಿಸಿದ ಕಳ್ಳರ ತಂಡವೊಂದು ರಸ್ತೆಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಳವು ಮಾಡಿ ಕೊಂಡೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೆಜ್ಜೇನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಮಾನಾಯ್ಕ್ ಹಾಗೂ ಉಮೇಶ್ ನಾಯ್ಕ್ ಎಂಬುವರಿಗೆ ಈ ಜಾನುವಾರುಗಳು ಸೇರಿವೆ.

ಕಳ್ಳರು ಎರಡು ಜಾನುವಾರುಗಳನ್ನು ಕಾರಲ್ಲಿ ತುಂಬಿಕೊಂಡು ಹೋಗುತ್ತಿರುವ ಕೃತ್ಯವು ಸಮೀಪದ ಮನೆಯೊಂದರಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಎರಡು ಹಸುಗಳ ಕಳವು

ಕಳೆದ ಕೆಲ ತಿಂಗಳುಗಳಿಂದ ಗ್ರಾಮದಲ್ಲಿ ಜಾನುವಾರುಗಳ ಕಳವು ಮಾಡಲಾಗುತ್ತಿದೆ. ಇತ್ತೀಚೆಗೆ ಸ್ಕಾರ್ಪಿಯೋ ಕಾರಲ್ಲಿ ಆಗಮಿಸಿ ಎರಡು ಹಸುಗಳನ್ನು ಕಳವು ಮಾಡಲಾಗಿದೆ. ಇದು ಗ್ರಾಮದ ಮನೆಯೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತಂತೆ ವಿನೋಬನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಕ್ಯಾಮರಾ ದೃಶ್ಯಾವಳಿ ಸಂಗ್ರಹಿಸಿದ್ದಾರೆ. ಗ್ರಾಮದಲ್ಲಿ ನಡೆಯುತ್ತಿರುವ ಜಾನುವಾರು ಕಳವು ಕೃತ್ಯಗಳಿಗೆ ಕಡಿವಾಣ ಹಾಕಲು ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES