Monday, December 23, 2024

ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ : ಯತ್ನಾಳ್ ಭವಿಷ್ಯ

ವಿಜಯಪುರ : ಮೂರು ತಿಂಗಳ ಹಿಂದೆ ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇನ್ನು ಆರು ತಿಂಗಳಲ್ಲಿ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ನಿನ್ನೆ ರಾತ್ರಿ ವಿಜಯಪುರದಲ್ಲಿ ಚುನಾವಣೆಯಲ್ಲಿ ಶ್ರಮಿಸಿದ ಕಾರ್ಯಕರ್ತರಿಗೆ ಔತಣ ಕೂಟ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ನು 6 ತಿಂಗಳಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬೀಳುತ್ತೆ. ಅಲ್ಲಿಯವರೆಗೆ ಸಮಾಧಾನದಿಂದ ಇರಬೇಕು ಎಂದು ತಿಳಿಸಿದ್ದಾರೆ.

ಅವರ ಕಾಂಗ್ರೆಸ್ ಶಾಸಕರಿಗೇ ಅನುದಾನ ಇಲ್ಲ ಕೊಡೋಕೆ. ರೊಕ್ಕ ಇಲ್ಲ, ಅನುದಾನ ಕೇಳಬೇಡಿ ಎನ್ನುತ್ತಾರೆ. ಅವರ ಶಾಸಕರೇ ಅಳುತ್ತಿದ್ದಾರೆ. ಇನ್ನು ವಿರೋಧ ಪಕ್ಷದ ನಮಗೆ ಎಲ್ಲಿಂದ ಅನುದಾನ ಕೊಡ್ತಾರೆ? ಅದಕ್ಕೆ ನೀವು ಕೆಲ ದಿನಗಳ ಕಾಲ ರೆಸ್ಟ್ ಮಾಡಿ. 6ರಿಂದ 7 ತಿಂಗಳು ಕಷ್ಟ ಇದೆ, ನಂತರ ನಮ್ಮ ಸರಕಾರ ಬರುತ್ತೆ. ಮತ್ತೆ ಅನುದಾನ ಸಿಗುತ್ತೆ ಎಂದು ಕ್ಷೇತ್ರದ ಕಾರ್ಯಕರ್ತರಿಗೆ, ಮತದಾರರಿಗೆ ಭರವಸೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES