Wednesday, January 22, 2025

77 ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಸಿಎಂ

ಬೆಂಗಳೂರು : ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ  77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ  ಸಂದೇಶವನ್ನು ನೀಡಿದರು.

ಇದನ್ನೂ ಓದಿ: ಜೆಡಿಎಸ್ ಕಚೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ಬಳಿಕ ತೆರೆದ ಜೀಪ್​ ಹತ್ತಿದ ಸಿಎಂ ಸಿದ್ದರಾಮಯ್ಯ ಮೈದಾನದಲ್ಲಿ ಸಂಚರಿಸಿ ಸೆಲ್ಯೂಟ್​ ಮಾಡುವ ಮೂಲಕ ಗೌರವ ಸಲ್ಲಿಸಿದರು. ರಾಜ್ಯ ಪೊಲೀಸ್​ ಇಲಾಖೆ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪೆರೇಡ್​ ನಡೆಯಿತು. ಈ ಪರೇಡ್​ ನೋಡಿಗರ ಕಣ್ಮನ ಸೆಳೆಯುವಂತಿತ್ತು. ನಗರದ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸ್ವತಂತ್ರ್ಯ ದಿನ ಆಚರಣೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​, ಎನ್​.ಎ ಹ್ಯಾರೀಸ್ ಸೇರಿದಂತೆ ಹಲವು ಶಾಸಕರು, ಮುಖಂಡರು ಮತ್ತು ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು

RELATED ARTICLES

Related Articles

TRENDING ARTICLES