Wednesday, January 22, 2025

ತಾಲ್ಲೂಕು ಕಚೇರಿ ಮೇಲಿಂದ ಹಾರಿ ವ್ಯಕ್ತಿ ಆತ್ಮಹತ್ಯೆ !

ಹೊಸಕೋಟೆ : ಸ್ವಾತಂತ್ರ್ಯ ದಿನಾಚರಣೆ ದಿನದಂದು ತಾಲ್ಲೂಕು ಕಛೇರಿ ಮೇಲಿಂದ ಬಿದ್ದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಕಚೇರಿ ಆವರಣ ದಲ್ಲಿ ನಡೆದಿದೆ.

ಇದನ್ನೂ ಓದಿ: ಅಂಬೇಡ್ಕರ್​ ಫೋಟೊ ಇಡದೇ ಸ್ವಾತಂತ್ರ್ಯ ದಿನಾಚರಣೆ: ದಲಿತ ಸಂಘಟನೆಗಳು ಆಕ್ರೋಶ

ಬಿಹಾರ ಮೂಲದ ಪ್ರೇಮ್ ಬಾಸ್ಕಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ, ಇಂದು ಬೆಳಗ್ಗೆ ಕಚೇರಿಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ತಾಲ್ಲೂಕು ಕಚೇರಿ ಕಟ್ಟಡದ ಮೇಲಿಂದ ಹಾರಿಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲಿಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು ಸದ್ಯ ಹೊಸಕೋಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES