Monday, December 23, 2024

ಜೆಡಿಎಸ್ ಕಚೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ಬೆಂಗಳೂರು : ಜಾತ್ಯಾತೀತ ಜನತಾದಳ ಪಕ್ಷದ ಕಚೇರಿಯಲ್ಲಿ ಇಂದು 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಧ್ವಜಾರೋಹಣ ನೆರವೇರಿಸಿದರು.

ಇದೇ ವೇಳೆ ಶಾಲಾ ಮಕ್ಕಳಿಗೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಸಿಹಿ ಹಂಚುವ ಮೂಲಕ ಸ್ವತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ಕಾರ್ಯಕ್ರಮದಲ್ಲಿ ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ ರಮೇಶ್ ಗೌಡ, ಪಕ್ಷದ ಹಿರಿಯ ನಾಯಕರಾದ ನಾರಾಯಣ ರಾವ್, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್ ತಿಪ್ಪೇಸ್ವಾಮಿ, ಟಿ. ಎ.ಶರವಣ ಮುಂತಾದವರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES