Monday, December 23, 2024

ನಮ್ಮದು ಡಬಲ್ ಡೆಕ್ಕರ್ ಬಸ್ ಇದ್ದಂತೆ : ಸಂತೋಷ್ ಲಾಡ್

ಧಾರವಾಡ : ನಮ್ಮದು ಡಬಲ್ ಡೆಕ್ಕರ್ ಬಸ್ ಇದ್ದಂತೆ. ಎಲ್ಲಿ ಬೇಕಾದರೂ ಹತ್ತಬಹುದು, ಎಲ್ಲಿ ಬೇಕಾದಲ್ಲಿ ಇಳಿಯಬಹುದು. ಯಾರೇ ಬಂದರೂ ಸ್ವಾಗತ ಮಾಡುತ್ತೇವೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಮುನಿರತ್ನ ಪುನಃ ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ಇರಬಹುದು, ಆದರೆ ಹೆಚ್ಚಿಗೆ ಗೊತ್ತಿಲ್ಲ. ನಾವು ಯಾರನ್ನೂ ಸೆಳೆಯುತ್ತಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ಸ್ವಾಗತ ಮಾಡುತ್ತೇವೆ ಎಂದಿದ್ದಾರೆ.

ಮುನೇನಕೊಪ್ಪ ಕಾಂಗ್ರೆಸ್ ಎಂಪಿ ಅಭ್ಯರ್ಥಿ ಎಂಬ ವಿಚಾರವಾಗಿ ಮಾತನಾಡಿ, ಆ ಬಗ್ಗೆ ಸ್ವಲ್ಪವೂ ಮಾಹಿತಿ ಇಲ್ಲ. ಅವರು ಬಂದರೇ ಸೇರಿಸಿಕೊಳ್ಳಲು ಸ್ವಾಗತ ಇದೆ. ಯಾರಿಗೆ ಎಂಪಿ ಟಿಕೆಟ್ ಎನ್ನುವುದು ಹೈಕಮಾಂಡ್ ಫೈನಲ್ ಮಾಡುತ್ತದೆ. ಮಾಜಿ ಶಾಸಕ ಚಿಕ್ಕನಗೌಡರ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ನನಗೂ ಬಂದಿದೆ. ಆದರೆ, ಅವರು ಏನೇನು ಷರತ್ತು ಹಾಕಿದ್ದಾರೆ ‌ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

ಕೇವಲ ಪ್ರಚಾರ ಗಿಟ್ಟಿಸಿಕೊಂಡಿದ್ದಾರೆ

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ ವಿಚಾರವಾಗಿ ಮಾತನಾಡಿ, ನಮ್ಮ ಸರ್ಕಾರದ ಕಾರ್ಯಕ್ರಮಗಳ ಮನೆ ಮನೆ ಮುಟ್ಟುತ್ತಿವೆ. ಅದರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. 10 ವರ್ಷದಿಂದ ಮೋದಿಯವರ ಮಾತುಗಳನ್ನು ಜನ ಕೇಳಿ ಬಿಟ್ಟಿದ್ದಾರೆ. ಕೇಂದ್ರ ಸರ್ಕಾರ ಎಲ್ಲ ರೀತಿಯಲ್ಲಿ ವಿಫಲವಾಗಿದೆ. ಮಾಧ್ಯಮಗಳ ಮೂಲಕ ಕೇವಲ ಪ್ರಚಾರ ಗಿಟ್ಟಿಸಿಕೊಂಡಿದ್ದಾರೆ ಎಂದು ಕುಟುಕಿದ್ದಾರೆ.

RELATED ARTICLES

Related Articles

TRENDING ARTICLES