Thursday, January 23, 2025

1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್; ಮಧು ಬಂಗಾರಪ್ಪ

ಬೆಂಗಳೂರು : 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಕುರಿತು ಶಿವಮೊಗ್ಗದಲ್ಲಿ ಚಾಲನೆ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಇದುವರೆಗೂ ಶಾಲೆಗಳಲ್ಲಿ 1 ರಿಂದ 8ನೇ ತರಗತಿ ಮಕ್ಕಳಿಗೆ ಮಾತ್ರ ಮೊಟ್ಟೆಗಳನ್ನು ಕೊಡುತ್ತಿದ್ದರು. ಆದರೆ ಆಗಸ್ಟ್ 18 ರಂದು 1 ರಿಂದ 10 ನೇ ತರಗತಿ ಮಕ್ಕಳಿಗೂ ಸಹ ಮೊಟ್ಟೆ, ಬಾಳೆಹಣ್ಣು ಹಾಗೂ ಚಿಕ್ಕಿಗಳನ್ನು ವಿತರಣೆ ಮಾಡುವಂತೆ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.

ಇದನ್ನು ಓದಿ : ಕುಡಿಯುವ ನೀರಿಗಾಗಿ ಹಾಹಾಕಾರ

ಅಷ್ಟೇ ಅಲ್ಲದೆ ವಾರದಲ್ಲಿ ಒಂದು ದಿನ ಮಾತ್ರ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುತ್ತಿದ್ದರು. ಆದರೆ ಇದೀಗ ವಾರದಲ್ಲಿ ಎರಡು ದಿನ ಮೊಟ್ಟೆ ಹಾಗೂ ಬಾಳೆಹಣ್ಣುಗಳನ್ನು ನೀಡಲಾಗುತ್ತದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ನೀಡುವಂತೆ ನಿರ್ಧಾರ ಮಾಡಲಾಗಿದೆ.

ರಾಜ್ಯದಲ್ಲಿ 60 ಲಕ್ಷ ಮಕ್ಕಳು ಈ ಯೋಜನೆ ಅಡಿಯಲ್ಲಿ ಬರಲಿದ್ದು, ಈ ಯೋಜನೆಗೆ ಸರ್ಕಾರ 280 ಕೋಟಿ ಮೀಸಲು ಇಡಲಾಗಿದೆ ಎಂ ದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

RELATED ARTICLES

Related Articles

TRENDING ARTICLES