Monday, January 27, 2025

ಕಲುಷಿತ ಆಹಾರ ಸೇವಿಸಿ ಹಾಸ್ಟೆಲ್​ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು!

ಚಿಕ್ಕಬಳ್ಳಾಫುರ: ಕಲುಚಿತ ಆಹಾರ ಸೇವಿಸಿ ಸರ್ಕಾರಿ ಹಾಸ್ಟೆಲ್​ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕೆ.ರಾಗುಟ್ಟಹಳ್ಳಿ ಯಲ್ಲಿ ನಡೆದಿದೆ.

ಇದನ್ನೂ ಓದಿ: ಪಾನಿಯ ಘಟಕ ಸ್ಥಾಪನೆಗೆ ಮಾಜಿ ಕ್ರಿಕೆಟಿಗ ಮುರಳಿಧರನ್​ 400 ಕೋಟಿ ಹೂಡಿಕೆ!

ಚಿಕ್ಕಬಳ್ಳಾಫುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೆ.ರಾಗುಟ್ಟಹಳ್ಳಿ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್​ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕಲುಷಿತ ಆಹಾರ ಸೇವಿಸಿದ ಹಾಸ್ಟೆಲ್​ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

RELATED ARTICLES

Related Articles

TRENDING ARTICLES