ಬೆಂಗಳೂರು : ಡಿಕೆಶಿ ಮನೆಗೆ ಯಾರು ಹೋಗಿದ್ರು? ಕಳ್ಳತನದಿಂದ ಯಾರಾದ್ರೂ ಹೋಗಿದ್ರಾ? ಬುರ್ಕಾ ಹಾಕಿಕೊಂಡು ಹೋಗಿದ್ರಾ? ಇದನ್ನು ಹೇಳಲಿ ಎಂದು ಬಿಜೆಪಿ ಶಾಸಕ ಮುನಿರತ್ನ ಕುಟುಕಿದ್ದಾರೆ.
ಆಪರೇಷನ್ ಹಸ್ತದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುನಿರತ್ನ ಭೇಟಿ ಮಾಡಿದ್ರು ಎಂಬ ಡಿಕೆಶಿ ಹೇಳಿಕೆ ಸ್ಪಷ್ಟನೆ ನೀಡಿದ್ದಾರೆ. ಕ್ಷೇತ್ರದ ವಿಚಾರದ ಬಗ್ಗೆ ಮಾತಾಡಿದ್ದನ್ನು ರಾಜಕೀಯವಾಗಿ ಡಿಕೆಶಿ ಬಳಸಿಕೊಳ್ಳೋದು ಬೇಡ ಎಂದು ಹೇಳಿದ್ದಾರೆ.
ನಾನು ಬಿಜೆಪಿ ಪಕ್ಷಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡ್ತೀನಿ. 17 ಜನರಲ್ಲಿ 16 ಜನ ಹೋಗ್ತಾರೋ ಬಿಡ್ತಾರೋ.. ಆದ್ರೆ, ನಾನಂತೂ ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ. 17 ಜನರಲ್ಲಿ ಯಾರು ಕಾಂಗ್ರೆಸ್ ಪಕ್ಷಕ್ಕೆ ಹೋಗ್ತಾರೆ ಅಂತ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.
ನಾನಂತೂ ಬಿಜೆಪಿ ಬಿಟ್ಟು ಹೋಗಲ್ಲ
ಡಿಕೆಶಿ, ಡಿಕೆಸು ಬಗ್ಗೆ ನನಗೆ ದ್ವೇಷ ಇಲ್ಲ. ನಾನು ರಾಜಕೀಯ ನಿವೃತ್ತಿ ತಗೆದುಕೊಳ್ಳುತ್ತೇನೆಯೇ ಹೊರತು ಕಾಂಗ್ರೆಸ್ ಪಕ್ಷಕ್ಕೆ ನಾನು ಹೋಗಲ್ಲ. ನನಗೆ ಕಾಂಗ್ರೆಸ್ ಪಕ್ಷದ ಅಗತ್ಯ ಇಲ್ಲ , ನಾನು ಅಲ್ಲಿಗೆ ಹೋಗಲ್ಲ. ನಾನಂತೂ ಬಿಜೆಪಿ ಬಿಟ್ಟು ಹೋಗಲ್ಲ ಎಂದು ಶಾಸಕ ಮುನಿರತ್ನ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.