Sunday, December 22, 2024

ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗ್ತಿದೆ, ನೋಡೋರಿಲ್ಲ, ಕೇಳೋರಿಲ್ಲ : ಕೋಡಿ ಶ್ರೀ

ಹಾಸನ : ಮಳೆ, ಗುಡುಗು, ಭೂಮಿ ಬಿರುಕು ಆಗುವುದು, ದ್ವೇಷಗಳು ಹೆಚ್ಚುತ್ತವೆ. ಅಪಮೃತ್ಯು ಎಲ್ಲಾ ನಡೆಯುತ್ತೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ಭವಿಷ್ಯ ನುಡಿದಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಳೆ ಬರುತ್ತೆ ತೊಂದರೆ ಏನಿಲ್ಲ. ಹಿಂದೆ ಒಂದು ಬಾರಿ ಮಳೆ ಬಂದಂತೆ ಇನ್ನೊಂದು ಬಾರಿ ಭಾರಿ ಮಳೆ ಬರುತ್ತೆ ಎಂದು ಹೇಳಿದ್ದಾರೆ.

ಮಳೆಗೇನು ತೊಂದರೆ ಆಗಲ್ಲ, ಕಾಲ‌ ಹೇಳ್ತಿನಿ, ಅಷ್ಟೇ ಮಳೆ‌ ಬರುತ್ತೆ. ಅನ್ನಕ್ಕೆ ತೊಂದರೆ ಇಲ್ಲಾ. ವಿಪರೀತ ಮಳೆಯಾಗುವ ಲಕ್ಷಣ ಇದೆ, ಬೇಕಾದಷ್ಟು ಮಳೆ ಬರುತ್ತೆ. ಪ್ರಕೃತಿಯಿಂದಲೂ ಹಾನಿ ಇದೆ, ಶ್ರಾವಣದಲ್ಲೇ ಮಳೆಯ ಬಗ್ಗೆ ಎಲ್ಲರಿಗೂ ಗೊತ್ತಾಗುತ್ತೆ. ಶ್ರಾವಣದ‌ ಮಧ್ಯಭಾಗದ ಮೇಲೆ ಕಾರ್ತಿಕದವರೆಗೂ ಮಳೆ ಆಗುತ್ತೆ. ಮತ್ತೆ ಮಳೆಯಿಂದ ಅಪಾಯ ಆಗುವ ಲಕ್ಷಣಗಳಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ಕೊಟ್ಟ ಮಾತಿಗೆ ತಪ್ಪಿದ್ದೀಯಾ..! : ಕೋಡಿ ಶ್ರೀ ಬೇಸರ

ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗ್ತಿದೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿ ಶ್ರೀಗಳು, ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗ್ತಾ ಇದೆ, ಏನು ಆಗಲ್ಲ. ನೋಡೋರಿಲ್ಲ, ಕೇಳೋರಿಲ್ಲ, ಆನಂದ ಪಡುವವರಿಲ್ಲ. ರಾಜ್ಯ ಸರ್ಕಾರಕ್ಕೆ ಏನು ತೊಂದರೆಯಿಲ್ಲ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಪಾರ್ಲಿಮೆಂಟ್ ಎಲೆಕ್ಷನ್‌ ಆದ್ಮೇಲೆ ತೀರ್ಮಾನ ಆಗುತ್ತೆ. ಪಾರ್ಲಿಮೆಂಟ್ ಚುನಾವಣೆ ಬಂದಾಗ ಏನಾಗುತ್ತೆ? ಯಾವ ಸರ್ಕಾರ ಬರುತ್ತೆ ಅಂತ ಹೇಳ್ತಿನಿ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES