Monday, December 23, 2024

ಕಂಡೀಷನ್ ಅಪ್ಲೈ.. ಬಿಜೆಪಿ ಶಾಸಕರಿಗೆ ಬಿಗ್ ಆಫರ್ ಕೊಟ್ಟ ಪರಮೇಶ್ವರ್

ಬೆಂಗಳೂರು : ಬಿಜೆಪಿ ಶಾಸಕರು ಬರಬಹುದು. ಬಿಜೆಪಿಯಲ್ಲಿ ಬೇಸರ ಆಗಿ, ಸರಿಯಾಗಿ ನಡೆಸಿಕೊಳ್ಳಲಿಲ್ಲ ಅಂತ ಹೇಳಿ ಕಾಂಗ್ರೆಸ್​ಗೆ ಬರಬಹುದು. ಬಿಜೆಪಿಯಿಂದ ಬರುವ ಶಾಸಕರನ್ನು ಸೇರ್ಪಡೆ ಮಾಡಿಕೊಳ್ತೀವಿ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಬಿಜೆಪಿ ಶಾಸಕರು ಕಾಂಗ್ರೆಸ್​ಗೆ ಬರುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಅಧ್ಯಕ್ಷರು ಈ ಬಗ್ಗೆ ಹೇಳಿದ್ದಾರೆ. ಪರಿಶೀಲನೆ ಮಾಡಿ ನಿರ್ಧಾರ ತೆಗೆದುಕೊಳ್ತೀವಿ ಅಂತ ಹೇಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ಐಡಿಯಾಲಜಿ ನಂಬಿ, ಕಾಂಗ್ರೆಸ್ ಲೀಡರ್ ಶಿಫ್ ಮೇಲೆ ನಂಬಿಕೆ‌ ಇಟ್ಟು ಪಕ್ಷಕ್ಕೆ ಬಂದರೆ ಬರಬಹುದು. ಹಿಂದೆ ಪಕ್ಷ ಬಿಟ್ಟು ಹೋದೋರು ಬರಬಹುದು. ಪಕ್ಷ ಬಿಟ್ಟು ಹೋಗೋರು ವಾಪಸ್ ಬಂದಿರೋ ಉದಾಹರಣೆ ಇದೆ. ಆದರೆ, ಅವರಿಗೆ ಫಸ್ಟ್ ಬೇಂಚ್ ಸಿಗೊಲ್ಲ. ತಪ್ಪು ಮಾಡಿದ್ದನ್ನು ಸರಿ ಮಾಡಿಕೊಳ್ತೀವಿ ಅಂದ್ರೆ ಮಾಡಿಕೊಂಡು ಬರಬಹುದು ಎಂದು ಬಿಗ್ ಆಫರ್ ಕೊಟ್ಟಿದ್ದಾರೆ.

ಬರೋರಿಗೆ ಫಸ್ಟ್ ಬೆಂಚ್ ಸಿಗೊಲ್ಲ

ಪಕ್ಷಕ್ಕೆ ಬರೋರಿಗೆ ಫಸ್ಟ್ ಬೆಂಚ್ ಸಿಗೊಲ್ಲ. ಆದ್ರೆ, ಅವರಿಗೆ ಕ್ಲಾಸ್ ರೂಂಗೆ ಅವಕಾಶ ಇದೆ. ಅವರು ಮತ್ತೆ ಫಸ್ಟ್ ಬೆಂಚ್​ ಸಿಗಬೇಕಾದ್ರೆ ತುಂಬಾ ದಿನ ಆಗುತ್ತೆ ಅಷ್ಟೆ. ನನ್ನ ಜೊತೆ ಶಾಸಕರು ಚರ್ಚೆ ಮಾಡಿರೋ ಬಗ್ಗೆ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಈ ಬಾರಿ ಕರ್ನಾಟಕದ ಜನತೆ ನಮಗೆ ಅಧಿಕಾರ ಕೊಟ್ಟಿದ್ದಾರೆ. ಅವರ ವಿಶ್ವಾಸಕ್ಕೆ ತಕ್ಕಂತೆ ಭರವಸೆ ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ಅದರಂತೆ ನಡೆದುಕೊಳ್ತೀವಿ ಎಂದು ಹೇಳಿದ್ದಾರೆ.

ನನ್ನ ಬಳಿ ಶಾಸಕರು ಚರ್ಚೆ ಮಾಡಿದ್ದಾರೆ

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲುಬೇಕು. ಇದಕ್ಕೆ ಏನು ಬೇಕೋ ಅದನ್ನು ಮಾಡ್ತೀವಿ. ಜನರಿಗೆ ಭರವಸೆ ಈಡೇರಿಸೋದು ಒಂದು ಕಡೆಯಾದ್ರೆ, ರಾಜಕೀಯ ಮಾಡೋದು ಮತ್ತೊಂದು ಕಡೆ. ಬಿಜೆಪಿ ಅವರು ಕಳೆದ ಬಾರಿ 25 ಸ್ಥಾನ ಪಡೆದಿದ್ದರು. ಈ ಬಾರಿ ನಾವು ಇಷ್ಟು ಸ್ಥಾನ ಪಡೆಯಬೇಕು ಅಂತ ಇದ್ದೇವೆ. ಆದರೆ, ಜನ ತೀರ್ಮಾನ ಮಾಡ್ತಾರೆ. ಜನರ ಬಳಿ ಹೋಗ್ತೀವಿ. ನನ್ನ ಬಳಿ ಶಾಸಕರು ಚರ್ಚೆ ಮಾಡಿದ್ದಾರೆ ಎಂದು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದು ಪರಮೇಶ್ವರ್ ಆಪರೇಷನ್ ಹಸ್ತದ ಸುಳಿವು ನೀಡಿದ್ದಾರೆ.

RELATED ARTICLES

Related Articles

TRENDING ARTICLES