Sunday, December 22, 2024

ಮಹಿಳೆಯರಿಗೆ ಉಚಿತ ಸಾರಿಗೆ ಸೇವೆ ಸ್ಥಗಿತ ಸುದ್ದಿ: ಗೊಂದಲಕ್ಕೆ ಕೆಎಸ್​ ಆರ್​ಟಿಸಿ ಸ್ಪಷ್ಟನೆ!

ಬೆಂಗಳೂರು : ಶಕ್ತಿಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಸಾರಿಗೆ ಸೇವೆ ಸ್ಥಗಿತ ಎಂಬ ಸುದ್ದಿ ಎಲ್ಲೆಡೆ ಪ್ರಸಾರವಾಗುತ್ತಿರುವ ಹಿನ್ನೆಲೆ  ಕೆಎಸ್​ಆರ್​ಟಿಸಿ ಸ್ಪಷ್ಟನೆ ನೀಡಿದೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಸೇವೆಯು ಇನ್ನು ಕೆಲವೇ ದಿನಗಳಲ್ಲಿ ಕೊನೆಗೊಳ್ಳಲಿದೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಕೆಎಸ್ಆರ್​ಟಿಸಿ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಸ್ಪಷ್ಟನೆ ನೀಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೆ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿತ್ತುದೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ.

ಮಹಿಳೆಯರಿಗೆ ಉಚಿತ ಪ್ರಯಾಣ ಶಕ್ತಿ ಯೋಜನೆಯು ಎಂದಿನಂತೆ ಮುಂದುವರೆಯಲಿದೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ . ಎಂಬ ಪ್ರಕಟಣೆಯನ್ನು ಟ್ವೀಟ್​ ಮಾಡುವ ಮೂಲಕ ಸ್ಪಷ್ಟಪಡಿಸಿದೆ.

RELATED ARTICLES

Related Articles

TRENDING ARTICLES