Monday, January 6, 2025

ತಲ್ವಾರ್​ನಿಂದ ಕೇಕ್ ಕತ್ತರಿಸಿದ ಗ್ರಾ.ಪಂ ಸದಸ್ಯ

ಬೆಳಗಾವಿ : ಚಿಕ್ಕೋಡಿಯ ನಿಡಗುಂದಿ ಗಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮ ಪಂಚಾಯಿತಿಯ ಸದಸ್ಯನಾದ ಸಿದ್ದರಾಯಿ ಪುಂಡಲೀಕ ಶಿಂಧೆ ಎಂಬಾತ ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಾನೆ.

ಸಿದ್ದರಾಯಿ ಶಿಂಧೆ ನಿಡಗುಂದಿ ಗ್ರಾಮದ ತನ್ನ ತೋಟದ ಮನೆಯಲ್ಲಿ ನಿನ್ನೆ ರಾತ್ರಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾನೆ. ಹುಟ್ಟುಹಬ್ಬ ಆಚರಣೆಯಲ್ಲಿ ಚಿಕ್ಕ ಚಿಕ್ಕ ಮಕ್ಕಳು ಭಾಗಿಯಾಗಿದ್ದಾರೆ. ಸಿದ್ದರಾಯಿ ಮೇಲೆ ಕಾನೂನು ಕ್ರಮ ಜರುಗಿಸಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES