Wednesday, January 22, 2025

ಪಿಎಂ ಇ-ಬಸ್ ಸೇವಾ ಯೋಜನೆಗೆ ಅನುಮೋದನೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಂಪುಟ ಸಭೆ ನಡೆದಿದೆ. ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಕುರಿತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ವಿಸ್ತರಣೆಗೂ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಕ್ಕೆ 14,903 ಕೋಟಿ ರೂ. ಅನುದಾನ ನೀಡಲಾಗಿದೆ.

32,500 ಕೋಟಿ ರೂಪಾಯಿ ವೆಚ್ಚದಲ್ಲಿ ಭಾರತೀಯ ರೈಲ್ವೆಗಾಗಿ 7 ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇ-ಬಸ್ ಯೋಜನೆಗೆ ಒಟ್ಟು 57,613 ಕೋಟಿ ರೂ. ನೀಡಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರ 20,000 ಕೋಟಿ ನೀಡಲಿದ್ದು, ಉಳಿದ ಹಣವನ್ನು ರಾಜ್ಯ ಸರ್ಕಾರ ಭರಿಸಲಿದೆ.

RELATED ARTICLES

Related Articles

TRENDING ARTICLES