Monday, December 23, 2024

ಯಾವುದೇ ಕಾರಣಕ್ಕೂ ಬಿಜೆಪಿ ಬಿಡಲ್ಲ : ಬಿ.ಸಿ. ಪಾಟೀಲ್

ಬೆಂಗಳೂರು : ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ. ಯಾಕೆ ಇಂತಹ ಸುದ್ದಿ ಹರಡುತ್ತಿದೆಯೋ ಗೊತ್ತಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟನೆ ಕೊಟ್ಟಿದ್ದಾರೆ.

ಬಿಜೆಪಿ ಶಾಸಕರು ಕಾಂಗ್ರೆಸ್​ ಪಕ್ಷಕ್ಕೆ ಹೋಗುತ್ತಾರೆ ಎಂಬ ವದಂತಿ ಬಗ್ಗೆ ಪವರ್ ಟಿವಿಯೊಂದಿಗೆ ಮಾತನಾಡಿರುವ ಅವರು, ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ. ನಾನಂತು ಪಕ್ಷ ಬಿಟ್ಟು ಹೋಗಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷಕೆಕ ಅಂತಹ ಪರಿಸ್ಥಿತಿ ಏನು ಬಂದಿದೆ? ಯಾರು ಹೋಗ್ತಾರೊ, ಬಿಡ್ತಾರೊ ಗೊತ್ತಿಲ್ಲ. ನಾನಂತು ಬಿಜೆಪಿಯಲ್ಲೇ ಇರ್ತಿನಿ. ನಮ್ಮ ಪಕ್ಷದ ನಾಯಕರು ಯಾರೂ ಸಹ ಕಾಂಗ್ರೆಸ್​ಗೆ ಹೋಗುವ ನಿರ್ಧಾರ ಮಾಡಿಲ್ಲ ಎಂದು ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.

ಬರಗಾಲ ಪೀಡಿತ ತಾಲೂಕು

ಮಳೆ ಬಾರದೆ ಬಿತ್ತಿದ ಬೆಳೆ ನಾಶವಾಗುತ್ತಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಕೂಡಲೇ ನಮ್ಮ ಹಿರೇಕೆರೂರು ತಾಲೂಕನ್ನು ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು. ರೈತರಿಗೆ ಬೆಳೆ ಹಾನಿ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES