Sunday, December 22, 2024

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ!

ಚಿತ್ರದುರ್ಗ : ರಾಜ್ಯದ ವಿವಿದೆಡೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತರ ದಾಳಿ ನಡೆಸಿದ್ದು ಚಿತ್ರದುರ್ಗದ  ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಪತ್ನಿ ಭಾರತಿ ಗೆ ಸೇರಿದ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಆದಾಯ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಬಂದ ಹಿನ್ನೆಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ಮತ್ತು ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಿದ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

ರಾಜ್ಯದಲ್ಲಿ 18ಕಡೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತರ ದಾಳಿ ನಡೆಸಿ ಮಹತ್ವದ ಮಾಹಿತಿ ಕಲೆಹಾಕುತ್ತಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಅಧಿಕಾರಿಗಳ ವಿರುದ್ದ ಹಲವು ದೂರುಗಳು ಬಂದಿದ್ದವು ಈ ಹಿನ್ನೆಲೆ ಇಂದು ಬೆಳಗ್ಗೆಯೇ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES